Advertisement
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಜಿಲ್ಲಾ ಸಮನ್ವಯ ಸಮಿತಿ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ, ಮಹಿಳೆಯರ ಮತ್ತು ಮಕ್ಕಳ ಸಾಗಾಟ ನಿವಾರಣೆ ಯೋಜನೆ, ಬಾಲ್ಯ ವಿವಾಹ ನಿಷೇಧ ಕಾನೂನು ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Related Articles
Advertisement
ಪ್ರಸ್ತುತ ಸಾಲಿನಲ್ಲಿ 23 ಬಾಲ್ಯ ವಿವಾಹ ಪ್ರಕರಣಗಳು ಕಂಡುಬಂದಿದ್ದು, ಅವುಗಳಲ್ಲಿ 19 ಪ್ರಕರಣಗಳನ್ನು ತಡೆಗಟ್ಟಲಾಗಿದೆ. 2 ಪ್ರಕರಣಗಳಲ್ಲಿ ಕಾನೂನು ಕ್ರಮ ಸಹ ತೆಗೆದುಕೊಳ್ಳಲಾಗಿದೆ. ಬಾಲ್ಯ ವಿವಾಹ ಸಮಾಜದಲ್ಲಿ ಅನಿಷ್ಠ ಪದ್ಧತಿಯಾಗಿದ್ದು, ಇದನ್ನು ತಪ್ಪಿಸಲು ಪ್ರತಿಯೊಬ್ಬರೂ ಮುಂದಾಗುವುದು ಒಳಿತು ಎಂದರು.
ಬಾಲ್ಯವಿವಾಹ ತಡೆಯುವ ಸಂಬಂಧ ಜಿಲ್ಲೆಯಲ್ಲಿ ಮಕ್ಕಳ ಸಹಾಯವಾಣಿ 1098 ಕಾರ್ಯನಿರ್ವಹಿಸುತ್ತಿದೆ. ಬಾಲ್ಯ ವಿವಾಹದಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದರು.
ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ ಗರ್ಭಿಣಿ ಹಾಗೂ ಬಾಣಂತಿಯರ ಆರೋಗ್ಯ ಸುಧಾರಣೆ, ವೇತನ ನಷ್ಟ ತುಂಬಿಕೊಡಲು ಜಿಲ್ಲೆಯಲ್ಲಿ 14,893 ಫಲಾನುಭವಿಗಳಿಗೆ 6.06 ಕೋಟಿ ರೂ. ಸಹಾಯಧನ ನೀಡಲಾಗಿದೆ ಎಂದರು. ಮಾತೃ ವಂದನಾ ಯೋಜನೆಯಲ್ಲಿಯಾವುದೇ ಅರ್ಹ ಫಲಾನುಭವಿಗಳು ವಂಚಿತರಾಗದಂತೆ ನೋಡಿಕೊಳ್ಳಲು ಅಂಗನವಾಡಿ ಮಟ್ಟದಿಂದ ನೋಂದಣಿ ಮಾಡುವುದರೊಂದಿಗೆ ಪ್ರತಿಯೊಬ್ಬರನ್ನು ಫಲಾನುಭವಿಗಳನ್ನಾಗಿಸಬೇಕು ಎಂದರು. ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ಗೆಳತಿ ವಿಶೇಷ ಚಿಕಿತ್ಸಾ ಘಟಕ ಕಳೆದ 5 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಇದನ್ನು ಒನ್ ಸ್ಟಾಂಪ್ ಸೆಂಟರ್ (ಸಖೀ)ಜೊತೆಗೆ ಸಂಯೋಜನೆಗೊಳಿ ಸಲಾಗಿದೆ. ನೊಂದ ಮಹಿಳೆಯರು ಇದರ ಉಪಯೋಗ ಪಡೆದುಕೊಳ್ಳಬಹುದಾಗಿದೆ. ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವೈ.ಬಿ. ಸುಂದ್ರೇಶ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೃಷ್ಣಪ್ಪ, ಮ್ಯಾನೇಜರ್ ಎನ್.ಪಿ.ದೇವಾನಂದ್ ಮತ್ತಿತರರು ಉಪಸ್ಥಿತರಿದ್ದರು.