Advertisement
ಚಿಕ್ಕಮಗಳೂರು: ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ 4 ಪಟ್ಟಣ ಪಂಚಾಯತ್‌ಗಳ ಪೈಕಿ ಮೂರರಲ್ಲಿ ಬಿಜೆಪಿ ಹಾಗೂ 1 ರಲ್ಲಿ ಕಾಂಗ್ರೆಸ್ ಆಡಳಿತದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಕಡೂರು ಪುರಸಭೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದೆ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.
Related Articles
Advertisement
ಮೂಡಿಗೆರೆ ಪಟ್ಟಣ ಪಂಚಾಯತ್‌ನ 11 ಸ್ಥಾನಗಳಲ್ಲಿ ಬಿಜೆಪಿ 6, ಕಾಂಗ್ರೆಸ್ 4 ಹಾಗೂ 1 ಸ್ಥಾನದಲ್ಲಿ ಜೆಡಿಎಸ್ ಗೆದ್ದಿದೆ. ಕೊಪ್ಪ ಪಟ್ಟಣ ಪಂಚಾಯತ್‌ನಲ್ಲಿ ಬಿಜೆಪಿ 6, ಕಾಂಗ್ರೆಸ್ 4 ಹಾಗೂ 1 ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಗೆದ್ದಿದ್ದಾರೆ. ನರಸಿಂಹರಾಜಪುರ ಪಟ್ಟಣ ಪಂಚಾಯತ್‌ನಲ್ಲಿ ಕಾಂಗ್ರೆಸ್ 9 ಹಾಗೂ 2 ಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಶೃಂಗೇರಿ ಪಟ್ಟಣ ಪಂಚಾಯತ್‌ನಲ್ಲಿ ಬಿಜೆಪಿ 7, ಕಾಂಗ್ರೆಸ್ 3 ಹಾಗೂ 1 ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಗೆದ್ದಿದ್ದಾರೆ.
ಕಳೆದ ಅವಧಿಯಲ್ಲಿ ಈ 5 ನಗರ ಸ್ಥಳೀಯ ಸಂಸ್ಥೆಗಳ ಒಟ್ಟಾರೆ 68 ಸ್ಥಾನಗಳಲ್ಲಿ ಬಿಜೆಪಿ 30, ಕಾಂಗ್ರೆಸ್ 27, ಜೆಡಿಎಸ್ 8 ಹಾಗೂ 2 ಸ್ಥಾನಗಳನ್ನು ಪಕ್ಷೇತರ ಅಭ್ಯರ್ಥಿಗಳು ಗೆದ್ದುಕೊಂಡಿದ್ದರು. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 3 ಸ್ಥಾನಗಳನ್ನು ಕಳೆದುಕೊಂಡು 27ಕ್ಕೆ ಇಳಿದಿದ್ದರೆ, ಕಾಂಗ್ರೆಸ್ ಕಳೆದ ಅವಧಿಯಂತೆಯೇ ಈ ಬಾರಿಯೂ 27 ಸ್ಥಾನಗಳನ್ನು ಗೆದ್ದಿದೆ. ಜೆಡಿಎಸ್ 1 ಸ್ಥಾನವನ್ನು ಕಳೆದುಕೊಂಡು 7ಕ್ಕೆ ಇಳಿದಿದ್ದರೆ ಪಕ್ಷೇತರರು ಕಳೆದ ಬಾರಿಗಿಂತ 4 ಸ್ಥಾನಗಳನ್ನು ಹೆಚ್ಚಾಗಿ ಗೆದ್ದು 6 ಸ್ಥಾನಕ್ಕೆ ಏರಿದ್ದಾರೆ.