Advertisement
ಕಳೆದ ಮೂರ್ನಾಲ್ಕು ದಿನಗಳಿಂದ ಜನ ಸಂಚಾರವನ್ನು ಹತೋಟಿಗೆ ತರಲು ನಗರದ ಪ್ರಮುಖ ರಸ್ತೆಗಳಲ್ಲಿ ಚೆಕ್‌ಪೋಸ್ಟ್ ನಿರ್ಮಿಸಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅನಾವಶ್ಯಕವಾಗಿ ಓಡಾಡುವವರ ವಾಹನಗಳನ್ನು ಜಪ್ತಿ ಮಾಡುವ ಮೂಲಕ ಅನಗತ್ಯ ಸಂಚಾರಕ್ಕೆ ಕಡಿವಾಣ ಹಾಕಲಾಗುತ್ತಿದೆ. ನಗರದ ಎಂಜಿ ರಸ್ತೆ, ಮಾರ್ಕೆಟ್ ರಸ್ತೆ, ಐಜಿ ರಸ್ತೆ, ಬಸವನಹಳ್ಳಿ ಮುಖ್ಯರಸ್ತೆ, ಹನುಮಂತಪ್ಪ ವೃತ್ತ, ಆಜಾದ್ ಪಾರ್ಕ್ ವೃತದದಲ್ಲಿ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿ ಅಗತ್ಯ ವಸ್ತುಗಳ ಖರೀದಿಗೆ ಬರುವವರನ್ನು ಮಾತ್ರ ನಗರೊಳಗೆ ಬಿಡಲಾಗುತ್ತಿದೆ. ಸುಖಸುಮ್ಮನೆ ತಿರುಗಾಡುವ ಬೈಕ್ ಮತ್ತು ಕಾರುಗಳನ್ನು ಜಪ್ತಿ ಮಾಡಲಾಗುತ್ತಿದೆ.
ಖರೀದಿದಾರರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ನಿರ್ದೇಶನ ನೀಡಲಾಗುತ್ತಿದ್ದು, ಕೃಷಿ ಉತ್ಪನ್ನ ಮಾರುಕಟ್ಟೆಗೆ ಬೀಗಿ ಪೊಲಿಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ಅನುಕೂಲ ಕಲ್ಪಿಸುವ ಕೊಡುವ ಉದ್ದೇಶದಿಂದ ನಗರದ ಮಾರ್ಕೇಟ್ ರಸ್ತೆಯಲ್ಲಿರುವ ನಗರಸಭೆ ಮಳಿಗೆಗಳಲ್ಲಿ ಹಣ್ಣು, ತರಕಾರಿ ಮಳಿಗೆಗಳನ್ನು ತೆರೆಯಲಾಗಿದೆ. ತರಕಾರಿ, ಹಣ್ಣು ಮಾರಾಟಕ್ಕೆ ಮೊಬೈಲ್ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮೊಬೈಲ್ ವಾಹನಗಳು ನಗರದ ಎಲ್ಲಾ ಬಡಾವಣೆಗಳಲ್ಲಿ ಸಂಚರಿಸುತ್ತಿವೆ. ತಳ್ಳುಗಾಡಿಗಳಲ್ಲಿ ತರಕಾರಿ ಮತ್ತು ಹಣ್ಣು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ರೈತರು ಬೆಳೆದ ಬೆಳೆಗಗಳನ್ನು ಹಾಪ್‌ಕಾಂಮ್ಸ್ ನೆರ ಖರೀದಿಗೆ ಅವಕಾಶ ಕಲ್ಪಿಸಲಾಗಿದ್ದು ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮವಹಿಸಲಾಗಿದೆ.
Related Articles
Advertisement