Advertisement

ಶಾಂತಿಪ್ರಿಯರು ಎನ್ನೋದನ್ನು ಸಾಬೀತುಪಡಿಸಿದ ಜನ

05:25 PM Apr 20, 2019 | Naveen |

ಚಿಕ್ಕಮಗಳೂರು: ಲೋಕಸಭಾ ಚುನಾವಣೆಯು ಶಾಂತಿಯುತವಾಗಿ ನಡೆದಿದ್ದು, ಜಿಲ್ಲೆಯ ಜನತೆ ಶಾಂತಿಪ್ರಿಯರು ಎಂಬುದನ್ನು ಮತ್ತೂಮ್ಮೆ ಸಾಬೀತುಪಡಿಸಿದ್ದಾರೆ ಎಂದು ಮೈತ್ರಿ ಪಕ್ಷಗಳ ಸಮನ್ವಯ ಸಮಿತಿ ಅಧ್ಯಕ್ಷ ಡಾ| .ಎಲ್‌.ವಿಜಯ್‌ಕುಮಾರ್‌ ತಿಳಿಸಿದರು.

Advertisement

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ-ಚಿಕ್ಕಮಗಳೂರು ಎರಡೂ ಜಿಲ್ಲೆಗಳಲ್ಲಿಯೂ ಯಾವುದೇ ಸಣ್ಣ ಗಲಭೆಯೂ ಇಲ್ಲದೆ ಚುನಾವಣೆ ಶಾಂತಿಯುತವಾಗಿ ನಡೆದಿದೆ. ಇದಕ್ಕಾಗಿ ಎರಡೂ ಜಿಲ್ಲೆಗಳ ಜನತೆ ಹಾಗೂ ಜಿಲ್ಲಾಡಳಿತಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಸಿಪಿಐ ಪಕ್ಷದ ಕಾರ್ಯಕರ್ತರು ಒಗ್ಗಟ್ಟಾಗಿ ನಿಷ್ಠೆಯಿಂದ ಕೆಲಸ ಮಾಡಿದ್ದಾರೆ.

ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಈ
ಬಾರಿ ಹೆಚ್ಚಿನ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ
ಎಂದು ಭವಿಷ್ಯ ನುಡಿದ ವಿಜಯಕುಮಾರ್‌, ವಿಧಾನ
ಪರಿಷತ್‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ,
ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌.ಭೋಜೇಗೌಡರವರ ಮಾರ್ಗದರ್ಶನದಲ್ಲಿ ಉತ್ತಮವಾಗಿ ಕೆಲಸ
ಮಾಡಲಾಗಿದೆ ಎಂದರು.

ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಎಚ್‌.ಎಚ್‌.ದೇವರಾಜ್‌
ಮಾತನಾಡಿ, ಜಿಲ್ಲೆಯಲ್ಲಿ ಯಶಸ್ವಿಯಾಗಿ ಚುನಾವಣೆ
ಎದುರಿಸಿದ್ದೇವೆ. ಜನರು ಉತ್ಸಾಹದಿಂದ ಮತದಾನ
ಮಾಡಿದ್ದಾರೆ. ವಿರೋಧ ಪಕ್ಷದ ಅಭ್ಯರ್ಥಿಗೆ ಹತಾಶೆ, ನಿರಾಸೆ ಉಂಟಾಗಿದ್ದು, ಮೈತ್ರಿ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisement

ಬಿಜೆಪಿ ಅಭ್ಯರ್ಥಿ ಶೋಭಕರಂದ್ಲಾಜೆ ಚುನಾವಣೆಯ
ದಿನ ಹೆಚ್ಚು ಮತಗಟ್ಟೆಗಳಿಗೆ ಭೇಟಿ ನೀಡಲೇ ಇಲ್ಲ.
ಅವರು ಹೋದ ಎಲ್ಲ ಬೂತ್‌ಗಳಲ್ಲಿಯೂ ಮತದಾರರ ಪ್ರತಿಕ್ರಿಯೆ ನೋಡಿ ಅವರಿಗೆ ಬೇಸರವುಂಟಾಯಿತು. ಹಾಗಾಗಿಯೇ ಅವರು ಬೆಂಗಳೂರಿಗೆ ಮತದಾನ ಮಾಡಲು ತೆರಳುತ್ತಿರುವುದಾಗಿ ನೆಪ ಹೇಳಿ ಇಲ್ಲಿಂದ ಕಾಲ್ಕಿತ್ತರು ಎಂದು ವ್ಯಂಗ್ಯವಾಡಿದರು.

ಜೆಡಿಎಸ್‌ ಜಿಲ್ಲಾಧ್ಯಕ್ಷ ರಂಜನ್‌ ಅಜಿತ್‌ ಕುಮಾರ್‌
ಮಾತನಾಡಿ, ಮೂರು ಪಕ್ಷದ ಕಾರ್ಯಕರ್ತರು ಬೂತ್‌ ಮಟ್ಟದಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಿದ ಪರಿಣಾಮ ಹಿಂದೆಂದೂ ಕಾಣದ ಬೆಂಬಲವನ್ನು ಜನತೆ ತೋರಿಸಿದ್ದಾರೆ. ಮೈತ್ರಿ ಅಭ್ಯರ್ಥಿ ಅತೀ ಹೆಚ್ಚು ಅಂತರದ ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next