Advertisement

ರೈತರ ಸಾಲ ಮನ್ನಾ ಮಾಡಿ

03:54 PM Apr 16, 2020 | Naveen |

ಚಿಕ್ಕಮಗಳೂರು: ಕೊರೊನಾ ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಬೆಳೆ ನಷ್ಟ ಅನುಭವಿಸುತ್ತಿರುವ ರೈತರ ಸಾಲವನ್ನು ರಾಜ್ಯ ಸರ್ಕಾರ ಸಂಪೂರ್ಣ ಮನ್ನಾ ಮಾಡಬೇಕೆಂದು ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಎಚ್‌.ಎಚ್‌.ದೇವರಾಜ್‌ ಒತ್ತಾಯಿಸಿದರು.

Advertisement

ತಾಲೂಕಿನ ಮಲ್ಲೇನಹಳ್ಳಿ ಗಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾತನಾಡಿದರು. ಲಾಕ್‌ಡೌನ್‌ನಿಂದ ಬಡವರು, ಮಧ್ಯಮ ವರ್ಗದವರು, ಕೂಲಿಕಾರ್ಮಿಕರು, ರೈತರ ಬದುಕನ್ನು ಮೂರಾಬಟ್ಟೆಯಾಗಿದೆ. ರೈತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹಾಗಾಗಿ, ರಾಜ್ಯ ಸರ್ಕಾರ ತಕ್ಷಣ ಕೃಷಿ ಇಲಾಖೆ ಅಧಿಕಾರಿಗಳಿಂದ ಬೆಳೆ ನಷ್ಟದ ಸಮೀಕ್ಷೆ ನಡೆಸಿ, ರೈತರಿಗೆ ಬೆಳೆ ನಷ್ಟ ತುಂಬಿಕೊಡಬೇಕು. ಅಲ್ಲದೇ, ಅವರ ಸಂಪೂರ್ಣ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿದರು.

ಭಕ್ತರಹಳ್ಳಿಯ ರೈತ ಮುಸ್ತಾಕ್‌ ಅಹಮದ್‌ ಮಾತನಾಡಿ, ಕೈ ಸಾಲ ಮಾಡಿ ಎರಡು ಎಕರೆ ಪ್ರದೇಶದಲ್ಲಿ ಎಲೆಕೋಸು ಹಾಗೂ ಮುಕ್ಕಾಲು ಎಕರೆ ಭೂಮಿಯಲ್ಲಿ ಬೀನ್ಸ್‌ ಬೆಳೆದಿದ್ದೆ. ಆದರೆ, ಕೊಳ್ಳುವರಿಲ್ಲದೇ ಹೊಲದಲ್ಲೇ ಬೆಳೆ ನಾಶವಾಗುತ್ತಿದೆ ಎಂದು ಅಳಲು ತೋಡಿಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next