Advertisement
ರಾಣಿಝರಿ ಬಳಿಯ ಬೆಟ್ಟವೊಂದರಿಂದ ಸುಮಾರು ಮೂರು ಸಾವಿರ ಅಡಿ ಆಳಕ್ಕೆ ಬಿದ್ದು ಯುವಕ ಮೃತಪಟ್ಟಿದ್ದಾನೆ. ಯುವಕ ಬೆಟ್ಟದಿಂದ ಪ್ರಪಾತಕ್ಕೆ ನಗೆದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಊಹಿಸಲಾಗಿದೆ.
Related Articles
Advertisement
ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಧರ್ಮಸ್ಥಳ ವಿಪತ್ತು ನಿರ್ವಹಣ ತಂಡ, ಬಣಕಲ್ ಸಮಾಜ ಸೇವಕ ಆರೀಫ್ ಮತ್ತು ಅವರ ಸ್ನೇಹಿತರು ಶೋಧ ಕಾರ್ಯದಲ್ಲಿ ತೊಡಗಿದ್ದರು. ಏಳೆಂಟು ಡ್ರೋಣ್ ಕ್ಯಾಮರಗಳನ್ನು ಬಳಸಿಯೂ ಶೋಧ ನಡೆಸಲಾಗಿತ್ತು.
ಇಂದು ಮಧ್ಯಾಹ್ನದ ಹೊತ್ತಿಗೆ ಯುವಕ ಶವ ಪ್ರಪಾತದಲ್ಲಿ ಪತ್ತೆಯಾಗಿದೆ. ಶೋಧ ಕಾರ್ಯ ನಡೆಸುತ್ತಿದ್ದ ತಂಡ ಸುಮಾರು 25 ಮಂದಿಯ ತಂಡ ಮೈದಾಡಿ ಕಡೆಯಿಂದ ಬೆಟ್ಟವನ್ನು ಇಳಿದು ಬೆಳ್ತಂಗಡಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಶವವನ್ನು ಪತ್ತೆ ಹಚ್ಚಿದೆ. ಸುಮಾರು ನಾಲ್ಕು ಸಾವಿರ ಅಡಿಯಿಂದ ಯುವಕ ಕೆಳಗೆ ಬಿದ್ದಿದ್ದು, ಆತನ ದೇಹ ಛಿದ್ರವಾಗಿದ್ದು, ಕೊಳೆತ ಸ್ಥಿತಿಗೆ ತಲುಪಿದೆ ಎಂದು ತಿಳಿದುಬಂದಿದೆ.
ವ್ಯೂ ಪಾಯಿಂಟ್ ನಿಂದ ಹಾರಿ ಆತ್ಮಹತ್ಯೆ ?ರಾಣಿಝರಿ ಸಮೀಪದಲ್ಲಿರುವ ವ್ಯೂ ಪಾಯಿಂಟ್ ನಿಂದಲೇ ಯುವಕ ಕೆಳಗೆ ಹಾರಿರುವ ಸಾಧ್ಯತೆಯಿದೆ ಎನ್ನಲಾಗಿದೆ. ವ್ಯೂ ಪಾಯಿಂಟ್ ನೇರದಲ್ಲಿಯೇ ಶವ ಪ್ರಪಾತದಲ್ಲಿ ಪತ್ತೆಯಾಗಿದೆ. ಯುವಕ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಪೊಲೀಸರು ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಭರತ್ ಇಂಜಿನಿಯರ್ ಪದವೀಧರನಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎಂದು ತಿಳಿದುಬಂದಿದೆ.