ಚಿಕ್ಕಮಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ. ಬೆಂಗಳೂರು ಏರ್ ಪೋರ್ಟ್ ಮುತ್ತಿಗೆ ಹಾಕಲು ತೆರಳುತ್ತಿದ್ದವರನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ.
Advertisement
ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಸೇರಿದಂತೆ 30 ಕ್ಕೂ ಹೆಚ್ಚು ಕಾರ್ಯಕರ್ತರು ಮೋದಿ ಗೋ ಬ್ಯಾಕ್ ಘೋಷಣೆ ಕೂಗಲು ಹೊರಟಿದ್ದರು.
10ಕ್ಕೂ ಹೆಚ್ಚು ವಾಹನಗಳಲ್ಲಿ ಹೊರಟ್ಟಿದ್ದ ಕೆಪಿಸಿಸಿ ಕಿಸಾನ್ ಸೆಲ್ ಅಧ್ಯಕ್ಷ ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ಚಿಕ್ಕಮಗಳೂರಿನ ಪ್ರವಾಸಿ ಮಂದಿರದ ಬಾಗಿಲಲ್ಲೇ ಪೊಲೀಸರು ಬಂಧಿಸಿದ್ದಾರೆ.