Advertisement

Tragedy: ಈಜು ಬಾರದೆ ಸ್ನೇಹಿತರ ಜೊತೆ ಈಜಲು ಹೋಗಿ ಯುವಕ ನೀರು ಪಾಲು

10:38 AM Oct 18, 2023 | Team Udayavani |

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋಗಿ ಯುವಕ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ನಲ್ಲೂರು ಕೆರೆಯಲ್ಲಿ ನಡೆದಿದೆ.

Advertisement

ಚಿಕ್ಕಮಗಳೂರು ನಗರದ ಕೋಟೆ ನಿವಾಸಿ 20 ವರ್ಷದ ಹರ್ಷ ಮೃತ ದುರ್ದೈವಿ.

ಹರ್ಷ ತನ್ನ ಸ್ನೇಹಿತರ ಜೊತೆ ನಲ್ಲೂರು ಕೆರೆಯಲ್ಲಿ ಈಜಲು ತೆರಳಿದ್ದಾರೆ, ಈ ವೇಳೆ ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾನೆ, ನಂತರ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಮೃತದೇಹವನ್ನ ಕೆರೆಯಿಂದ ಹೊರ ತೆಗೆದಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Mishap: ಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಅಪಘಾತ… ಬಾಣಸಿಗ ಮೃತ್ಯು

Advertisement

Udayavani is now on Telegram. Click here to join our channel and stay updated with the latest news.

Next