Advertisement

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

06:29 PM Dec 28, 2024 | Team Udayavani |

ಚಿಕ್ಕಮಗಳೂರು: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ಹೊಟ್ಟೆನೋವು ತಾಳಲಾರದೆ ಮನೆಯಲ್ಲೇ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಗುಳ್ಳದಮನೆ ಗ್ರಾಮದಲ್ಲಿ ನಡೆದಿದೆ.

Advertisement

ಗ್ರಾಮದ ಬಿಂದು (21) ಆತ್ಮಹತ್ಯೆಗೆ ಶರಣಾದ ನವವಿವಾಹಿತೆ.

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಮಂತೇನಹಳ್ಳಿ ಪ್ರಸನ್ನಕುಮಾರ್ ಮತ್ತು ಬಿಂದು ಕಳೆದ ನ.24 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾಗಿ ಕೇವಲ ಒಂದು ತಿಂಗಳು ಮೂರು ದಿನವಾಗಿದ್ದು, ಮೂರು ದಿನದ ಹಿಂದೆ ಗಂಡನ ಜತೆ ತವರು ಮನೆಗೆ ಬಂದಿದ್ದಳು. ಮೂರು ದಿನದಿಂದ ದೇವಸ್ಥಾನಗಳಿಗೆ ಸುತ್ತಾಡಿದ್ದ ದಂಪತಿಗಳು ಮನೆಯಲ್ಲಿನ ಪೂಜೆಯಲ್ಲೂ ಪಾಲ್ಗೊಂಡಿದ್ದರು.

ಶನಿವಾರ ತೀವ್ರ ಹೊಟ್ಟೆನೋವು ತಾಳಲಾರದೆ ಬಿಂಧು ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ಬಿಂದುವಿಗೆ ಕಳೆದ ಮೂರ್ನಾಲ್ಕು ವರ್ಷಗಳಿಂದಲೂ ಹೊಟ್ಟೆನೋವು ಸಮಸ್ಯೆ ಇತ್ತು ಎನ್ನಲಾಗುತ್ತಿದೆ. ಈ ಸಂಬಂಧ ಕುಟುಂಬಸ್ಥರು ಆಸ್ಪತ್ರೆಗೂ ತೋರಿಸಿದ್ದರು. ಆದರೆ, ನೋವು ಕಡಿಮೆಯಾಗಿರಲಿಲ್ಲ ಎನ್ನಲಾಗುತ್ತಿದೆ.

ಹೊಟ್ಟೆನೋವು ಹೆಚ್ಚಾದ ಹಿನ್ನಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ. ಸ್ಥಳಕ್ಕೆ ತರೀಕೆರೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಇದನ್ನೂ ಓದಿ: Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

Advertisement

Udayavani is now on Telegram. Click here to join our channel and stay updated with the latest news.

Next