ಬಾಳೆಹೊನ್ನೂರು: ರಾಜ್ಯದಲ್ಲಿ ವಾಸಿಸುತ್ತಿರುವ ಮುಸಲ್ಮಾನರು, ಕ್ರೈಸ್ತರು, ಜೈನರು, ಬೌದ್ಧರು, ಸಿಖVರು ಮತ್ತು ಪಾರ್ಸಿ ಜನಾಂಗದವರು ಮತೀಯ ಅಲ್ಪಸಂಖ್ಯಾತರ ವ್ಯಾಪ್ತಿಗೆ ಸೇರಿದ್ದು ಇವರಲ್ಲಿ ಬಹುಪಾಲು ಜನರು ಆರ್ಥಿಕವಾಗಿ ಹಿಂದುಳಿದಿದ್ದು ಅವರ ಅಭಿವೃದ್ಧಿಗೆ ಸರಕಾರವು ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷ ಮುಕ್ತಾರ್ ಎಸ್. ಪಠಾಣ ತಿಳಿಸಿದರು. ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠಕ್ಕೆ ಭೇಟಿ ನೀಡಿ ಶ್ರೀ ರಂಭಾಪುರಿ ಜಗದ್ಗುರುಗಳ ಆಶೀರ್ವಾದ ಪಡೆದು ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಮತೀಯ ಅಲ್ಪಸಂಖ್ಯಾತ ಸಮುದಾಯಗಳ ಕಡು ಬಡವರನ್ನು ಸ್ವಾವಲಂಬಿಗಳಾಗಿ ಮಾಡುವುದು ಮತ್ತು ಅವರಿಗೆ ಸಾಮಾಜಿಕ ನ್ಯಾಯ, ಶಿಕ್ಷಣ, ಮತ್ತು ಆರ್ಥಿಕ ಸ್ಥಿತಿಗತಿಗಳನ್ನು ಸುದಾರಿಸುವುದು ನಿಗಮದ ಉದ್ದೇಶವಾಗಿದೆ. ಸ್ವಯಂ ಉದ್ಯೋಗಕ್ಕೆ ಅರಿವು ಹಾಗೂ ಸಹಾಯಧನ ಯೋಜನೆ, ವಿದ್ಯಾಭ್ಯಾಸಕ್ಕಾಗಿ ಸಾಲ ಯೋಜನೆ, ಶ್ರಮಶಕ್ತಿ ಸಂಯೋಜನೆ ಸಣ್ಣ ವ್ಯಾಪಾರ ಸಾಲ ಮತ್ತು ಸಹಾಯಧನ ಯೋಜನೆ, ಗಂಗಾ ಕಲ್ಯಾಣ, ಕೃಷಿ ಭೂಮಿ ಖರೀದಿ, ಗೃಹ ನಿರ್ಮಾಣ ಮಾರ್ಜಿನ್ ಸಾಲ ಯೋಜನೆ ಹಾಗೂ ವೃತ್ತಿ ಪ್ರೋತ್ಸಾಹ ಯೋಜನೆ ಜಾರಿಗೊಳಿಸಲಾಗಿದೆ ಎಂದರು.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜೀನಾಮೆ ಬಗ್ಗೆ ಪ್ರಶ್ನಿಸಿದಾಗ ಉತ್ತರಿಸಿದ ಅವರು, ಯಡಿಯೂರಪ್ಪ ಅವರು ಸರ್ವಜನಾಂಗದವರನ್ನು ಸಮಾನತೆಯಿಂದ ಕಂಡ ಧೀಮಂತ ನಾಯಕ. ಎಲ್ಲಾ ಸಮುದಾಯದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಿದ್ದರು. ಅಲ್ಲದೆ ಕೊರೊನಾ ಸಂಕಷ್ಟ ಕಾಲದಲ್ಲಿ ಎಲ್ಲಾ ವರ್ಗಕ್ಕೂ ಪ್ಯಾಕೇಜ್ ಘೋಷಣೆ ಮಾಡಿದ್ದರು.
ಹೈಕಮಾಂಡ್ ನಿರ್ಣಯದಂತೆ ರಾಜೀನಾಮೆ ನೀಡಿದ್ದಾರೆ. 2014ರಲ್ಲಿ ತನಿಕೋಡ್ ಎನೌಟರ್ ನಡೆದಿದ್ದು, ದಕ್ಷ ಪೊಲೀಸ್ ಅಧಿ ಕಾರಿ ನವೀನ್ ನಾಯ್ಕ ಅವರ ಮೇಲೆ ಪ್ರಕರಣ ದಾಖಲಿಸಿದ ಬಗ್ಗೆ ಪ್ರಶ್ನಿಸಿದಾಗ ಉತ್ತರಿಸಿದ ಅವರು ಪ್ರಕರಣದ ಸಮಗ್ರ ಮಾಹಿತಿ ಪಡೆದು ಮುಖ್ಯಮಂತ್ರಿ ಹಾಗೂ ಗೃಹಸಚಿವರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
ಕೆಐಎಡಿಯ ಅಧ್ಯಕ್ಷ ಸುರೇಶ್‌ಯಾಧವ್, ಆಶೋಕ್ ಗೌಡ, ಶಂಕರ ಬಾಗೇವಾಡಿ, ಗುತ್ತಿಗೆದಾರ ನಾನಾಗೌಡ ಬಿರಾದಾರ, ಜಿಲ್ಲಾ ಅಲ್ಪಸಂಖ್ಯಾತ ನಿಗಮದ ಅಧಿ ಕಾರಿಗಳಾದ ಗೋಪಾಲ, ಹೇಮ, ಬಿ. ಕಣಬೂರು ಗ್ರಾಪಂ ಸದಸ್ಯ ಯು.ಅಶ್ರಫ್ ಇದ್ದರು.