ಚಿಕ್ಕಮಗಳೂರು: ಶಿಕ್ಷಕರ ಅರ್ಹತಾ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಸಂಬಂ ಧಿಸಿದ ಇಲಾಖೆ ಅಧಿ ಕಾರಿಗಳಿಗೆ ಜಿಲ್ಲಾ ಧಿಕಾರಿ ಕೆ.ಎನ್. ರಮೇಶ್ ಸೂಚಿಸಿದರು. ಮಂಗಳವಾರ ನಗರದ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆ.22ರಂದು ಜಿಲ್ಲೆಯಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ನಿಯಮ ಉಲ್ಲಂಘನೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದರು.
ಪರೀಕ್ಷೆ ಎದುರಿಸುವ ಅಭ್ಯರ್ಥಿಗಳಿಗೆ ತಮ್ಮ ಕೊಠಡಿ ಸಂಖ್ಯೆಯ ಬಗ್ಗೆ ಗೊಂದಲವಾಗದಂತೆ ಪರೀಕ್ಷಾ ಕೇಂದ್ರಗಳಲ್ಲಿ ಮೂರು ಕಡೆಗಳಲ್ಲಿ ನೋಂದಣಿ ಸಂಖ್ಯೆ ಮತ್ತು ಕೊಠಡಿ ಸಂಖ್ಯೆಗಳನ್ನು ಡಿಸ್‌ಪ್ಲೇ ಮಾಡಬೇಕು. ಜಿಲ್ಲೆಯ ಎಲ್ಲಾ ಪರೀಕ್ಷ ಕೇಂದ್ರಗಳಲ್ಲಿ 2ರಂತೆ ಆರೋಗ್ಯ ತಪಾಸಣಾ ಕೇಂದ್ರಗಳನ್ನು ಹಾಗೂ ಕೋವಿಡ್ ಗುಣಲಕ್ಷಣಗಳನ್ನು ಹೊಂದಿರುವ ಅಭ್ಯರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಕಲ್ಪಿಸಬೇಕು.
ಕೋವಿಡ್ ಪಾಸಿಟಿವ್ ಇರುವ ಅಭ್ಯರ್ಥಿಗಳಿಗೆ ಸಿಸಿಸಿ ಸೆಂಟರ್‌ಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಡಬೇಕೆಂದು ತಿಳಿಸಿದರು. ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಇದ್ದರೂ ಸಹ ಅಭ್ಯರ್ಥಿಗಳು ಪರೀûಾ ಪ್ರವೇಶ ಪತ್ರವನ್ನು ತೋರಿಸಿದಲ್ಲಿ ಮುಕ್ತ ಅವಕಾಶ ಕಲ್ಪಿಸುವಂತೆ ತಿಳಿಸಿದ ಅವರು,ಮಾರ್ಗಾಧಿ ಕಾರಿಗಳ ಸಂಚಾರಕ್ಕೆ ವಾಹನ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಅ ಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಆ.22ರಂದು ನಡೆಯಲಿರುವ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಒಟ್ಟು 8 ಪರೀûಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಸರ್ಕಾರಿ ಪಪೂ ಕಾಲೇಜು, ಬೇಲೂರು ರಸ್ತೆ, ಶ್ರೀ ಭುವನೇಶ್ವರಿ ಬಾಲಕಿಯರ ಪ್ರೌಢಶಾಲೆ, ಬೇಲೂರು ರಸ್ತೆ, ಸನ್ಸ್ ಜೋಸೆಫ್ ಬಾಲ ಕಿಯರ ಪ್ರೌಢಶಾಲೆ, ಎಂಇಎಸ್ ಪ್ರೌಢಶಾಲೆ, ಸರ್ಕಾರಿ ಪಪೂ ಕಾಲೇಜು, ಬಾಲಕಿಯರ ಪ್ರೌಢಶಾಲೆ ಬಸವನಹಳ್ಳಿ ಇಲ್ಲಿ ಬೆಳಗ್ಗೆ 9.30 ರಿಂದ 12 ಗಂಟೆಯವರೆಗೆ ಮೊದಲ ಅವ ಧಿಯ ಪರೀಕ್ಷೆ 5 ಪರೀûಾ ಕೇಂದ್ರಗಳಲ್ಲಿ ನಡೆಯಲಿದೆ.
ಎರಡನೇ ಅವಧಿ ಪರೀಕ್ಷೆ ಸರ್ಕಾರಿ ಪಪೂ ಕಾಲೇಜು, ಬೇಲೂರು ರಸ್ತೆ, ಶ್ರೀ ಭುವನೇಶ್ವರಿ ಬಾಲಕಿಯರ ಪ್ರೌಢಶಾಲೆ, ಬೇಲೂರು ರಸ್ತೆ, ಸನ್ ಜೋಸೆಫ್ ಬಾಲಕಿಯರ ಪ್ರೌಢಶಾಲೆ, ಎಂಇಎಸ್ ಪ್ರೌಢಶಾಲೆ, ಸರ್ಕಾರಿ ಪಪೂ ಕಾಲೇಜು, ಬಾಲಕಿಯರ ಪ್ರೌಢಶಾಲೆ ಬಸವನಹಳ್ಳಿ, ಜೆ.ವಿ.ಎಸ್. ಇಂಗ್ಲಿಷ್ ಮಾಧ್ಯಮ ಶಾಲೆ, ವಿಜಯಪುರ, ಸಂಜೀವಿನಿ ಇಂಗ್ಲಿಷ್ ಮಾಧ್ಯಮ ಶಾಲೆ, ಕೆ.ಎಂ. ರೋಡ್, ಸನ್ ಜೋಸೆಫ್ ಬಾಲಕರ ಪ್ರೌಢಶಾಲೆ ಜ್ಯೋತಿನಗರ ಸೇರಿ ಒಟ್ಟು 8 ಪರೀûಾ ಕೇಂದ್ರಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ 4.30 ರವರೆಗೆ ಪರೀಕ್ಷೆ ನಡೆಯಲಿದೆ, ಮೊದಲ ಅವಧಿಯಲ್ಲಿ 1,159 ಮತ್ತು ಮಧ್ಯಾಹ್ನದ ಅವಧಿಯಲ್ಲಿ 1,768 ಅಭ್ಯರ್ಥಿಗಳು ಸೇರಿದಂತೆ ಒಟ್ಟು 2,927 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬಿ.ವಿ.ಮಲ್ಲೇಶಪ್ಪ ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆ ಅ ಧಿಕಾರಿ ಮುರುಗೇಂದ್ರ ಶಿರೋಳ್ಕರ್ ಸೇರಿದಂತೆ ವಿವಿಧ ಇಲಾಖೆ ಅ ಧಿಕಾರಿಗಳು ಇದ್ದರು.