Advertisement
ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡು ಒಂದೂವರೆ ವರ್ಷ ಕಳೆದಿದ್ದು, ಕೋವಿಡ್ ಮೊದಲ ಅಲೆ ಮತ್ತು 2ನೇ ಅಲೆಯನ್ನು ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಇಲಾಖೆ ಸಮರ್ಥವಾಗಿ ಎದುರಿಸಿದೆ. ಸದ್ಯ ಕೋವಿಡ್ 3ನೇ ಅಲೆಯ ಭೀತಿ ಜನರ ಮುಂದಿದೆ. ಕಳೆದ ಒಂದೂವರೆ ವರ್ಷದಲ್ಲಿ ಜಿಲ್ಲೆಯಲ್ಲಿರುವ ವೈದ್ಯಕೀಯ ವ್ಯವಸ್ಥೆಯಲ್ಲಿ ಕೆಲವೊಂದು ಸುಧಾರಣೆಗಳನ್ನು ಕಂಡುಕೊಳ್ಳಲು ಸಾಧ್ಯವಾಗಿದೆ. ಜಿಲ್ಲೆಯ ಸರ್ಕಾರಿ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಈ ಹಿಂದೆ ಐಸಿಯು ಬೆಡ್ ವ್ಯವಸ್ಥೆಯನ್ನು ಒಳಗೊಂಡಿರಲಿಲ್ಲ.
Related Articles
Advertisement
ಸದ್ಯ 3ನೇ ಅಲೆಯ ಭಯ ಜನತೆಯನ್ನು ಕಾಡುತ್ತಿದ್ದು 3ನೇ ಅಲೆ ಮಕ್ಕಳಿಗೆ ಹೆಚ್ಚಿನ ಪ್ರಮಾಣದಲ್ಲಿ ಬಾಧಿಸಲಿದೆ ಎಂಬ ತಜ್ಞರ ವರದಿಯ ಹಿನ್ನೆಲೆಯಲ್ಲಿ ಸರ್ಕಾರ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ 12 ಮಕ್ಕಳ ವೆಂಟಿಲೇಟರ್ ಮತ್ತು ಪ್ರತೀ ತಾಲೂಕು ಆಸ್ಪತ್ರೆಗೆ 9 ಮಕ್ಕಳ ವೆಂಟಿಲೇಟರ್ ನೀಡಲಾಗಿದೆ. ಪ್ರಧಾನಮಂತ್ರಿ ಕೇರ್ ಫಂಡ್ ಹಾಗೂ ಸಿಎಸ್ ಆರ್ ಸಂಘ-ಸಂಸ್ಥೆಗಳ ಸಹಕಾರದಿಂದ ಪ್ರತೀ ತಾಲೂಕು ಆಸ್ಪತ್ರೆ ಆವರಣದಲ್ಲಿ 500 ಲೀಟರ್ ಎಲ್‌ಪಿಎಂ ಆಕ್ಸಿಜನ್ ಜನರೇಟ್ ಪ್ಲಾ Âಂಟ್ ನಿರ್ಮಾಣ ಕಾರ್ಯ ನಡೆಯುತ್ತಿದೆ.
ಜಿಲ್ಲಾಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಿಗೆ ವೈದ್ಯರ ನೇಮಕ ಮಾಡಿಕೊಳ್ಳಲಾಗಿದ್ದು, 12 ಎಂ.ಡಿ. ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದೆ. 5 ಜನ ಸ್ಪೆಶಲಿಸ್ಟ್ ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದೆ. 35 ಜನ ಎಂಬಿಬಿಎಸ್ ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದೆ. ಇನ್ನೂ ತಾಲೂಕು ಆಸ್ಪತ್ರೆಗಳಲ್ಲಿ 50 ಹಾಸಿಗೆಗೆ ಆಕ್ಸಿಜನ್ ಪೈಪ್‌ಲೈನ್ ಅಳವಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತೆ ತಲಾ 50 ಹಾಸಿಗೆಗಳಿಗೆ ಆಕ್ಸಿಜನ್ ಆಳವಡಿಸುವ ಕಾರ್ಯ ನಡೆಯಲಿದೆ. ಜಿಲ್ಲೆಯ 5 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಾದರಿ ಪ್ರಾಥಮಿಕ ಆರೋಗ್ಯ ಮಾಡಲಾಗುತ್ತಿದೆ.
ಜಿಲ್ಲೆಯ ಒಂದು ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆ ಆಸ್ಪತ್ರೆಯಾಗಿ ಹೆಚ್ಚಿಸಲಾಗುತ್ತಿದೆ. ಸದ್ಯ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡ ಬಳಿಕ ಜಿಲ್ಲಾಸ್ಪತ್ರೆ ಸೇರಿದಂತೆ ತಾಲೂಕು ಆಸ್ಪತ್ರೆ, ಸಮುದಾಯ ಕೇಂದ್ರ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೂಲ ಸೌಲಭ್ಯಗಳನ್ನು ಹೆಚ್ಚಿಸಲಾಗಿದ್ದು ಜಿಲ್ಲೆಯ ಜನತೆಗೆ ಉತ್ತಮ ಆರೋಗ್ಯ ಸೇವೆ ಒದಗಿಸಲಾಗುತ್ತಿದೆ. ಜಿಲ್ಲೆಯಲ್ಲಿರುವ ಆಸ್ಪತ್ರೆಗಳಿಗೆ ಇನಷ್ಟು ಮೂಲ ಸೌಲಭ್ಯಗಳ ಅಗತ್ಯವಿದ್ದು, ಶೀಘ್ರವೇ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿ ಎಂಬುದು ಜಿಲ್ಲೆಯ ಜನರ ಆಗ್ರಹವಾಗಿದೆ.
ಕೋವಿಡ್ 3ನೇ ಅಲೆ ಎದುರಿಸಲು ಸಿದ್ಧತೆ: ಜಿಲ್ಲೆಯಲ್ಲಿ ಕೋವಿಡ್ 1ನೇ ಅಲೆ ಮತ್ತು 2ನೇ ಅಲೆಯನ್ನು ಸಮರ್ಥವಾಗಿ ಎದುರಿಸಿದ್ದು 3ನೇ ಅಲೆ ಎದುರಾಗುವ ಭೀತಿ ಇದೆ. ಈ ಹಿನ್ನೆಲೆಯಲ್ಲಿ 3ನೇ ಅಲೆಯನ್ನು ಸಮರ್ಥವಾಗಿ ನಿರ್ವಹಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಐಸಿಯು ಬೆಡ್‌ಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ. 3ನೇ ಅಲೆ ಮಕ್ಕಳಿಗೆ ಹೆಚ್ಚಿನ ಪ್ರಮಾಣದಲ್ಲಿ ಬಾಧಿ ಸಲಿದೆ ಎಂಬ ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ 12 ವೆಂಟಿಲೇಟರ್ ಅಳವಡಿಸಲಾಗಿದೆ.
ತಾಲೂಕು ಆಸ್ಪತ್ರೆಗಳಲ್ಲಿ 9 ಮಕ್ಕಳ ವೆಂಟಿಲೇಟರ್ ಅಳವಡಿಸಲಾಗಿದೆ. ಮೂರನೇ ಅಲೆ ನಿಭಾಯಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.