Advertisement

ಲಾಕ್‌ ಡೌನ್‌ ನಲ್ಲಿ ಕೆಲ ವಿನಾಯ್ತಿ

09:23 PM Jun 21, 2021 | Team Udayavani |

ಚಿಕ್ಕಮಗಳೂರು: ಕೋವಿಡ್‌ ನಿಯಂತ್ರಿಸಲು ರಾಜ್ಯ ಸರ್ಕಾರ ವಿಧಿ  ಸಿರುವ ಲಾಕ್‌ಡೌನ್‌ ಕಾμನಾಡಿನಲ್ಲಿ ಮುಂದುವರಿಯಲಿದ್ದು, ಕೆಲವೊಂದು ವಿನಾಯಿತಿಗಳನ್ನು ನೀಡಲಾಗಿದೆ ಎಂದು ಜಿಲ್ಲಾ  ಧಿಕಾರಿ ಕೆ.ಎನ್‌. ರಮೇಶ್‌ ತಿಳಿಸಿದ್ದಾರೆ. ಭಾನುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಈ ಹಿಂದೆ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೂ ಅವಕಾಶ ನೀಡಲಾಗಿತ್ತು.

Advertisement

ಈ ಸಮಯಾವಕಾಶವನ್ನು ಬದಲಾಯಿಸಿ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೂ ವಿಸ್ತರಿಸಲಾಗಿದೆ. ನಗರ ಪ್ರದೇಶದಿಂದ ಗ್ರಾಮೀಣ ಪ್ರದೇಶಕ್ಕೆ ಜನರ ಓಡಾಟವನ್ನು ನಿರ್ಬಂ ಧಿಸಲಾಗಿದೆ. ಬೀದಿಬದಿ ವ್ಯಾಪಾರಸ್ಥರಿಗೆ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೂ ಅವಕಾಶ ನೀಡಲಾಗಿದೆ. ಹೋಂ ಡೆಲಿವರಿಗೆ ಹೆಚ್ಚಿನ ಆದ್ಯತೆ ನೀಡುವಂತೆ ತಿಳಿಸಿದ್ದು, ಅಂಗಡಿಗಳಲ್ಲಿ ವ್ಯಾಪಾರ ನಡೆಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ನಿಯಮಗಳನ್ನು ಉಲ್ಲಂಘಿಸಿದಲ್ಲಿ ಅಂಗಡಿ ಬಂದ್‌ ಮಾ ಡಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

ತಳ್ಳುಗಾಡಿ ಮತ್ತು ಗೂಡ್ಸ್‌ ವಾಹನಗಳಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಹಣ್ಣು- ತರಕಾರಿ ವ್ಯಾಪಾರ ನಡೆಸಲು ಅನುಮತಿಸಲಾಗಿದೆ. ಹಾಪ್‌ಕಾಮ್ಸ್‌ ಗಳು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಹಣ್ಣು ಮತ್ತು ತರಕಾರಿಯನ್ನು ವಾಹನ ಮೂಲಕ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಅಂಗಡಿ ತೆರೆಯಲು ಅವಕಾಶ ನೀಡಿಲ್ಲವೆಂದು ತಿಳಿಸಿದ್ದಾರೆ. ಸೂಪರ್‌ ಮಾರ್ಕೆಟ್‌ಗಳು ಮತ್ತು ಮಾಲ್‌ಗ‌ಳು ಬೆಳಗ್ಗೆಯಿಂದ ಸಂಜೆವರೆಗೂ ಹೋಂ ಡೆಲಿವರಿ ನೀಡಲು ಅವಕಾಶ ನೀಡಲಾಗಿದೆ. ಹೊಟೇಲ್‌ಗ‌ಳಲ್ಲಿ ಪಾರ್ಸಲ್‌ಗೆ ಅವಕಾಶ ನೀಡಲಾಗಿದೆ. ಸಾರ್ವಜನಿಕರು ಕುಳಿತು ಊಟ- ಉಪಾಹಾರ ಮಾಡುವುದನ್ನು ನಿರ್ಬಂ  ಧಿಸಲಾಗಿದೆ. ಮದ್ಯದಂಗಡಿಗಳು ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆವರೆಗೂ ವ್ಯಾಪಾರ ನಡೆ ಸಲು ಅವಕಾಶ ನೀಡಲಾಗಿದೆ.

ಕೋವಿಡ್‌ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದ್ದಾರೆ. ಬ್ಯಾಂಕ್‌ಗಳು, ನ್ಯಾಯಾಲಯ ಗಳು, ಇಶ್ಯೂರೆನ್ಸ್‌ ಕಚೇರಿಗಳು, ಗ್ರಾಮ ಒನ್‌ ಕೇಂದ್ರಗಳು, ಪೋಸ್ಟ್‌ ಆμàಸ್‌, ಎಟಿಎಂಗಳು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೂ ಕಾರ್ಯ ನಿರ್ವಹಿಸಲಿವೆ. ಖಾಸಗಿ ಭದ್ರತಾ ಸೇವೆಗಳನ್ನು ಅನುಮತಿಸಲಾಗಿದೆ. ತುರ್ತುಸೇವೆ ಗಳು, ಕೃಷಿ ಸಂಬಂ ಧಿತ ಅಂಗಡಿ ಮಳಿಗೆಗಳು, ಲೋಕೋಪಯೋಗಿ ಗೃಹಮಂಡಳಿ, ಪ್ರಾದೇಶಿಕ ಸಾರಿಗೆ ಕಚೇರಿ, ಕೋ-ಅಪರೇಟಿವ್‌ ಸೊಸೈಟಿ, ಕಂದಾಯ ಇಲಾಖೆ ಕಚೇರಿಗಳು ಶೇ.50ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸಲಿವೆ. ನ್ಯಾಯಾಲಯಗಳು ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಕಾರ್ಯ ನಿರ್ವಹಿಸಲಿವೆ. ವಕೀಲರ ಕಚೇರಿಗಳಲ್ಲಿ ಶೇ.50ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸಬಹುದಾಗಿದೆ. ನೋದಣಾ  ಧಿಕಾರಿ ಕಚೇರಿ ಉಪನೋಂದಣಾಧಿ ಕಾರಿ ಕಚೇರಿಗಳು ಕಾರ್ಯ ನಿರ್ವಹಿಸಲಿವೆ.

ಕೃಷಿಗೆ ಸಂಬಂ ಧಿಸಿದ ರಸಗೊಬ್ಬರ ಸೇರಿದಂತೆ ಇತರೆ ಪರಿಕರ ಅಂಗಡಿಗಳನ್ನು ಬೆಳಗ್ಗೆ 6ರಿಂದ 10ಗಂಟೆಯವರೆಗೂ ತೆರೆಯಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಬಸ್‌ ಸಂಚಾರಕ್ಕೆ ಅವಕಾಶ ನೀಡಿದ್ದು ಶೇ.50ರಷ್ಟು ಪ್ರಯಾಣಿಕರು ಪ್ರಯಾಣಿಸಲು ಅನುಮತಿ ನೀಡಲಾಗಿದೆ. ಪ್ರಯಾಣದ ಸಂದರ್ಭದಲ್ಲಿ ದಾಖಲೆಗಳನ್ನು ಹಾಜರುಪಡಿಸಬೇಕು. ಟ್ಯಾಕ್ಸಿ ಮತ್ತು ಆಟೋರಿದಲ್ಲಿ ಇಬ್ಬರು ಪ್ರಯಾಣಿಕರು ಸಂಚರಿಸಲು ಅವಕಾಶ ನೀಡಲಾಗಿದೆ. ರಾತ್ರಿ ಕರ್ಫ್ಯೂ ನಿರ್ಬಂಧಗಳು ಒಳಪಟ್ಟಿರುತ್ತವೆ.

Advertisement

ರಾತ್ರಿ 7ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ನೈಟ್‌ಕರ್ಫ್ಯೂ ಹಾಗೂ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next