Advertisement

ಚುನಾವಣಾ ಕರ್ತವ್ಯ ಸಮರ್ಥವಾಗಿ ನಿಭಾಯಿಸಿ

01:04 PM May 05, 2019 | Naveen |

ಚಿಕ್ಕಮಗಳೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗವು ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದು, ಚುನಾವಣಾ ಕರ್ತವ್ಯಕ್ಕೆ ನೇಮಕವಾಗಿರುವ ಅಧಿಕಾರಿಗಳು ಚುನಾವಣಾ ಕರ್ತವ್ಯವನ್ನು ಕಟ್ಟುನಿಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಸೂಚನೆ ನೀಡಿದರು.

Advertisement

ಜಿಲ್ಲಾಧಿಕಾರಿಗಳ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಕಡೂರು ಪುರಸಭೆ, ಮೂಡಿಗೆರೆ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ಪಟ್ಟಣ ಪಂಚಾಯತ್‌ಗಳಿಗೆ ಚುನಾವಣಾ ಕರ್ತವ್ಯಕ್ಕೆ ನೇಮಕವಾಗಿರುವ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮೇ. 9 ರಂದು ಕಡೂರು ಪುರಸಭೆ ಹಾಗೂ ಮೂಡಿಗೆರೆ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ಪಟ್ಟಣ ಪಂಚಾಯತ್‌ಗಳಿಗೆ ಅಧಿಸೂಚನೆ ಪ್ರಕಟವಾಗಲಿದೆ. ಚುನಾವಣೆ ನಡೆಯುವ ಆಯಾ ಪುರಸಭೆ ಹಾಗೂ ಪಟ್ಟಣ ಪಂಚಾಯತ್‌ಗಳಲ್ಲಿ ಕರ್ತವ್ಯಕ್ಕೆ ನೇಮಕವಾಗಿರುವ ಆರ್‌ಒ ಮತ್ತು ಎಆರ್‌ಒಗಳ ಜವಾಬ್ದಾರಿಯು ಮಹತ್ವದ್ದಾಗಿದ್ದು, ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳನ್ನು ಚಾಚು ತಪ್ಪದೇ ಪಾಲಿಸುವಂತೆ ತಿಳಿಸಿದ ಅವರು, ಚುನಾವಣೆಯು ಶಾಂತಿಯುತವಾಗಿ ನಡೆಯಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಡಾ| ಕುಮಾರ್‌ ಮಾತನಾಡಿ, ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮೊದಲು ಬ್ಯಾಲೆಟ್ ಪೇಪರ್‌ನಲ್ಲಿ ನಡೆಯುತ್ತಿತ್ತು. ಈ ಬಾರಿ ವಿದ್ಯುನ್ಮಾನ ಮತ ಯಂತ್ರಗಳ ಮೂಲಕ ನಡೆಯಲಿದೆ. ಇದರ ಕುರಿತಾಗಿ ಆರ್‌ಒ ಹಾಗೂ ಎಆರ್‌ಒ ಅವರು ಮತದಾರರಲ್ಲಿ ಜಾಗೃತಿ ಮೂಡಿಸುವುದಲ್ಲದೆ ಚುನಾವಣಾ ಕರ್ತವ್ಯಕ್ಕೆ ಸ್ಥಳೀಯ ಅಧಿಕಾರಿಗಳನ್ನು ನೇಮಿಸದಂತೆ ಎಚ್ಚರ ವಹಿಸಬೇಕು ಎಂದರು.

ಒಂದು ವಾರ್ಡ್‌ನ ಮತದಾರರು ಇನ್ನೊಂದು ವಾರ್ಡ್‌ಗೆ ಹೋಗಿ ಮತ ಹಾಕದಂತೆ ಎಚ್ಚರ ವಹಿಸಿಬೇಕು. ಆದ್ದರಿಂದ ಆಯಾ ವ್ಯಾಪ್ತಿಯ ಮುನ್ಸಿಪಾಲ್ ಬಿಲ್ ಕಲೆಕ್ಟರ್‌ಗಳನ್ನು ಚುನಾವಣಾ ಕೆಲಸಕ್ಕೆ ಬಳಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಮೀಸಲಾತಿಗೆ ಅನುಗುಣವಾಗಿ ಚುನಾವಣೆ ನಡೆಯುವುದರಿಂದ ಇದನ್ನು ಅರಿತು ಅಧಿಕಾರಿಗಳು ಮುನ್ನೆಚ್ಛರಿಕೆಯಿಂದ ಕಾರ್ಯ ನಿರ್ವಹಿಸಬೇಕು ಹಾಗೂ ಪೋಲಿಂಗ್‌ ಬೂತ್‌ಗಳನ್ನು ಆರ್‌ಒ ಮತ್ತು ಎಆರ್‌ಒ ಮಾಹಿತಿ ಪಡೆದು ಹೊಸ ಮತದಾರರ ಪಟ್ಟಿಯನ್ನು ಸಿದ್ಧತೆ ಮಾಡಿ ಅದನ್ನು ಪರಿಶೀಲಿಸಬೇಕು ಎಂದು ತಿಳಿಸಿದರು.

ನಾಮಪತ್ರಗಳನ್ನು ಆರ್‌ಒಗಳು ಕುಲಂಕುಶವಾಗಿ ಪರಿಶೀಲಿಸಬೇಕು. ಅರೆಕಾಲಿಕ ನ್ಯಾಯಾಧೀಶನಂತೆ ಯಾವುದೇ ಪಕ್ಷಪಾತವಿಲ್ಲದೆ ಚುನಾವಣಾ ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು. ಸಭೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನೇಮಕವಾಗಿರುವ ಆರ್‌ಒ ಹಾಗೂ ಎಆರ್‌ಒಗಳು ಉಪಸ್ಥಿತರಿದ್ದರು.

ಮೇ. 9 ರಂದು ಕಡೂರು ಪುರಸಭೆ ಹಾಗೂ ಮೂಡಿಗೆರೆ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ಪಟ್ಟಣ ಪಂಚಾಯತ್‌ಗಳಿಗೆ ಅಧಿಸೂಚನೆ ಪ್ರಕಟವಾಗಲಿದೆ. ಚುನಾವಣೆ ನಡೆಯುವ ಆಯಾ ಪುರಸಭೆ ಹಾಗೂ ಪಟ್ಟಣ ಪಂಚಾಯತ್‌ಗಳಲ್ಲಿ ಕರ್ತವ್ಯಕ್ಕೆ ನೇಮಕವಾಗಿರುವ ಆರ್‌ಒ ಮತ್ತು ಎಆರ್‌ಒಗಳ ಜವಾಬ್ದಾರಿಯು ಮಹತ್ವದ್ದಾಗಿದ್ದು, ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳನ್ನು ಚಾಚು ತಪ್ಪದೇ ಪಾಲಿಸಬೇಕು.
ಡಾ| ಬಗಾದಿ ಗೌತಮ್‌, ಜಿಲ್ಲಾಧಿಕಾರಿ.

Advertisement

Udayavani is now on Telegram. Click here to join our channel and stay updated with the latest news.

Next