Advertisement

Chikkamagaluru; ಅರ್ಚಕ ಹಿರೇಮಗಳೂರು ಕಣ್ಣನ್ ವೇತನ ತಡೆ ಹಿಡಿದು ಜಿಲ್ಲಾಡಳಿತದ ನೋಟಿಸ್

01:13 PM Jan 23, 2024 | |

ಚಿಕ್ಕಮಗಳೂರು: ಚಿಕ್ಕಮಗಳೂರು ಹೊರ ವಲಯದಲ್ಲಿರುವ ಶ್ರೀ ಕೋದಂಡ ರಾಮಚಂದ್ರ ಸ್ವಾಮಿ ದೇವಾಲಯದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಹಿರೇಮಗಳೂರು ಕಣ್ಣನ್ ಅವರಿಗೆ ಜಿಲ್ಲಾಡಳಿತ ನೋಟಿಸ್ ನೀಡಿದೆ.

Advertisement

ಕನ್ನಡದ ಪಂಡಿತ, ಕನ್ನಡದ ಪೂಜಾರಿ ಎಂದೇ ಖ್ಯಾತಿ ಪಡೆದಿರುವ ಹಿರೇಮಗಳೂರು ಕಣ್ಣನ್ ಅವರ ವೇತನವನ್ನು ತಡೆ ಹಿಡಿದು, 4500 ರೂ. 10 ವರ್ಷಕ್ಕೆ 4,74,000 ರೂ. ಹಣವನ್ನು ಸರ್ಕಾರಕ್ಕೆ ವಾಪಸ್ ನೀಡುವಂತೆ ಚಿಕ್ಕಮಗಳೂರು ಜಿಲ್ಲಾಡಳಿತ ನೋಟಿಸ್ ಜಾರಿ ಮಾಡಿದೆ.

ರಾಜ್ಯ ಸರ್ಕಾರ ಪ್ರತಿ ತಿಂಗಳು 7500 ರೂ. ವೇತನ ನೀಡುತ್ತಿತ್ತು. ಆದರೆ, ಇದೀಗ ದೇವಾಲಯದ ಆದಾಯ ಕಡಿಮೆ ಇದೆ ಎಂಬ ಕಾರಣ ನೀಡಿ ಈ ಹಿಂದೆ ನೀಡಿದ್ದ 7500 ರೂ. ವೇತನದಲ್ಲಿ 4500 ರೂ. ಅನ್ನು ವಾಪಸ್ ನೀಡುವಂತೆ, ಈ ತಿಂಗಳ ವೇತನವನ್ನು ತಡೆ ಹಿಡಿದು ತಹಶಿಲ್ದಾರ್ ಸುಮಂತ್ ನೋಟಿಸ್ ಜಾರಿ ಮಾಡಿದ್ದಾರೆ.

ಹಿರೇಮಗಳೂರು ಕಣ್ಣನ್ ಅವರು ಈ ದೇಗುಲದಲ್ಲಿ ದಿನ ನಿತ್ಯವೂ ಸೀತಾ ರಾಮ ಲಕ್ಷ್ಮಣರಿಗೆ ಕನ್ನಡದಲ್ಲೇ ಮಂತ್ರಘೋಷಗಳಿಂದ ಪೂಜೆ ಸಲ್ಲಿಸುವುದು ವಿಶೇಷವಾಗಿದ್ದು, ರಾಜ್ಯ ಹೊರ ರಾಜ್ಯದಿಂದ ಆಗಮಿಸುವ ನೂರಾರು ಭಕ್ತರು ಕಲ್ಯಾಣ ರಾಮರ ದರ್ಶನ ಪಡೆಯುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next