Advertisement

ತಂಬಾಕು ಉತ್ಪನ್ನದಿಂದ ದೂರವಿರಿ

03:17 PM Sep 11, 2019 | Naveen |

ಚಿಕ್ಕಮಗಳೂರು: ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತಹ ತಂಬಾಕು ಉತ್ಪನ್ನ ಸೇವನೆಯಿಂದ ಪ್ರತಿಯೊಬ್ಬರೂ ದೂರವಿರಬೇಕೆಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಹೇಳಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಎರಡನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಂಬಾಕು ಉತ್ಪನ್ನಗಳಲ್ಲಿ 4 ಸಾವಿರಕ್ಕೂ ಹೆಚ್ಚು ರಾಸಾಯನಿಕ ಸಂಯುಕ್ತಗಳಿದ್ದು, ಇವುಗಳ ಸೇವನೆಯಿಂದ ಮಾರಕ ರೋಗಗಳಾದಂತಹ ಕ್ಯಾನ್ಸರ್‌, ಹೃದಯ ಸಂಬಂಧಿ ಕಾಯಿಲೆಗಳು ಬರುವ ಸಾಧ್ಯತೆಗಳಿವೆ. ಇವುಗಳಿಂದ ದೂರವಿದ್ದಲ್ಲಿ ಮಾತ್ರ ಉತ್ತಮ ಆರೋಗ್ಯ ಹೊಂದಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಶಾಲಾ-ಕಾಲೇಜು ಆವರಣದ ಸುತ್ತಮುತ್ತಲಿನ ಅಂಗಡಿ- ಮುಂಗಟ್ಟುಗಳಲ್ಲಿ ಅಪ್ರಾಪ್ತರಿಗೆ ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಇವುಗಳನ್ನು ಉಲ್ಲಂಘಿಸಿದಲ್ಲಿ ಅಂತಹ ಅಂಗಡಿ ಮಾಲಿಕರ ಪರವಾನಗಿಯನ್ನು ರದ್ದುಗೊಳಿಸಬೇಕೆಂದು ಸೂಚನೆ ನೀಡಿದರು.

ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯ ಉದ್ಯಮಿದಾರರಿಗೆ ಅಂಗಡಿ ಪರವಾನಗಿ ನೀಡುವಾಗ ಕೋಟ್ಪಾ ಕಾಯ್ದೆ ನಿಯಮಗಳಲ್ಲಿ ಕಡ್ಡಾಯವಾಗಿ ಷರತ್ತು ವಿಧಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

Advertisement

ಈಗಾಗಲೇ ಆಯ್ದ ಶಾಲೆಗಳಲ್ಲಿ ತಂಬಾಕು ಮುಕ್ತ ಶಾಲೆಗಳೆಂದು ಘೋಷಿಸಲು ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳಿಗೆ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕೆ ತಿಳಿಸಿದರು.

ಧೂಮಪಾನ ವ್ಯಸನಿಗಳು ವ್ಯಸನದಿಂದ ದೂರವಾಗಲು ಇಚ್ಛಿಸುವವರಿಗೆ ಅರಿವು ಮೂಡಿಸಿ ಅಗತ್ಯ ಚಿಕಿತ್ಸಾ ಸೌಲಭ್ಯಗಳನ್ನು ಜಿಲ್ಲಾಸ್ಪತ್ರೆಯ ಜಿಲ್ಲಾ ತಂಬಾಕು ವ್ಯಸನ ಮುಕ್ತ ಕೇಂದ್ರದ ಮೂಲಕ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ| ಕುಮಾರ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ| ಪ್ರಭು, ಜಿಲ್ಲಾ ತಂಬಾಕು ನಿಯಂತ್ರಣ ಕೇಂದ್ರದ ಕಾರ್ಯಕ್ರಮಾಧಿಕಾರಿ ಎಚ್.ಕೆ.ಮಂಜುನಾಥ್‌, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ದಿನೇಶ್‌ ಹಾಗೂ ಮತ್ತಿತರರ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next