Advertisement

Chikkamagaluru: ಕಾಂಗ್ರೆಸ್ ಪ್ರತಿಭಟನೆ; ರಾಜ್ಯಪಾಲರ ಪ್ರತಿಕೃತಿ ದಹಿಸಿ ಆಕ್ರೋಶ

01:42 PM Aug 19, 2024 | Team Udayavani |

ಚಿಕ್ಕಮಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿದ ರಾಜ್ಯಪಾಲರ ನಡೆಯನ್ನು ವಿರೋದಿಸಿ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದ್ದಾರೆ.

Advertisement

ಚಿಕ್ಕಮಗಳೂರು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಹಾಗೂ ಕಡೂರು ತಾಲೂಕಿನ ಸಖರಾಯಪಟ್ಟಣದ ಬೀದಿಗಳಲ್ಲಿ ರಾಜ್ಯಪಾಲರ ಅಣಕು ಶವ ಹೊತ್ತು ಗೋ ಬ್ಯಾಕ್ ರಾಜ್ಯಪಾಲ ಎಂದು ಘೋಷಣೆ ಮಾಡುತ್ತಾ ಸಖರಾಯಪಟ್ಟಣದ ನಿಲ್ದಾಣದ ಮುಂಭಾಗ ರಾಜ್ಯಪಾಲರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.‌

ರಾಜ್ಯಪಾಲರು ಬಿಜೆಪಿ ಏಜೆಂಟ್ ನಂತೆ ವರ್ತಿಸುತ್ತಿದ್ದಾರೆ ಎಂದು ಕಾರ್ಯಕರ್ತರು ಕಿಡಿಕಾರಿದ್ದು, ಕಡೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next