Advertisement
ಕಳೆದು 15-20 ವರ್ಷದಿಂದ ಕೆಲಸ ಮಾಡುತ್ತಿರುವ ಮಹಿಳೆಯರು- ಪುರುಷ ರನ್ನು ಕೆಲಸದಿಂದ ವಜಾಗೊಳಿಸಿ, ಮೂರ್‍ನಾಲ್ಕು ತಿಂಗಳ ಹಿಂದಷ್ಟೇ ಕೆಲಸಕ್ಕೆ ಹಾಜರಾದವರನ್ನು ಮುಂದುವರೆಸಿರುವುದು ಎಷ್ಟು ಸರಿ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
Related Articles
Advertisement
ಬಿಎಸ್‌ಪಿ ಜಿಲ್ಲಾ ಸಂಚಾಲಕ ಕೆ.ಟಿ. ರಾಧಾಕೃಷ್ಣ ಮಾತನಾಡಿ, ಮಹಿಳೆಯರಿಗಾಗಿ ಅನೇಕ ಕಾನೂನುಗಳಿವೆ ಎಂದು ರಾಜಕಾರಣಿಗಳು, ಸರ್ಕಾರದ ಪ್ರತಿನಿಧಿಗಳು ಮಾತನಾಡುತ್ತಾರೆ. ಮಹಿಳೆ ಯರಿಗೆ ರಕ್ಷಣೆ ನೀಡುತ್ತೇವೆ, ಹಕ್ಕು ಕೊಡುತ್ತೇವೆ ಎಂದೆಲ್ಲಾ ಹೇಳುತ್ತಾರೆ. ಆದರೆ, ಅವೆಲ್ಲಾ ಭಾಷಣಕ್ಕೆ ಮಾತ್ರ ಸೀಮಿತವಾಗಿವೆಯೇ ಹೊರತು ಯಾವುದೂ ಕಾರ್ಯಗತವಾಗಿಲ್ಲ. ಜಿಲ್ಲೆಯಲ್ಲಿ ಹೊರಗುತ್ತಿಗೆ ನೌಕರರು ಒಂದು ರೀತಿ ಸರ್ಕಾರಿ ಜೀತ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ 25 ವರ್ಷಗಳಲ್ಲಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಅಧಿಕಾರಕ್ಕೆ ಬಂದಿವೆ. ಯಾರು ಏನು ಮಾಡಿದ್ದಾರೆ. ಮೂರೂ ಪಕ್ಷಗಳು ಅಧಿಕಾರದಲ್ಲಿದ್ದ ಸಂದರ್ಭ ರಾಜ್ಯದಲ್ಲಿ ಲಕ್ಷಾಂತರ ಮುಗ್ಧ ಜನರನ್ನು ಜೀತದಾಳುಗಳನ್ನಾಗಿ ಇಟ್ಟುಕೊಂಡು ಅನ್ಯಾಯವನ್ನೇ ಮಾಡಿವೆ ಎಂದು ದೂರಿದರು.
2ಸಾವಿರ ರೂ.ಗೆ ಕೆಲಸ ಆರಂಭಿಸಿ ಕಳೆದ 18-20 ವರ್ಷಗಳಿಂದ ನಿರಂತರವಾಗಿ ಕೆಲಸ ಮಾಡುತ್ತ, ಬಂದ ಸಂಬಳದಲ್ಲೇ ಮಕ್ಕಳಿಗೆ ಶಿಕ್ಷಣ ಕೊಡಿಸಿ ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ. ಈಗ ಏಕಾಏಕಿ ಕೆಲಸದಿಂದ ತೆಗೆದು ಹಾಕಿ ಅನ್ನಕ್ಕೆ ಸಂಚಕಾರ ತಂದಿದ್ದಾರೆ. ಅವರನ್ನು ಕೆಲಸದಲ್ಲಿ ಮುಂದುವರೆಸದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ರುಕ್ಮಿಣಿ, ಜಯಂತಿ, ಕಿರಣ್, ಗಂಗೇಗೌಡ, ಶರತ್, ವಾಣಿ, ವಾಣಿ ಮತ್ತಿತರ ಕಾರ್ಮಿಕ ಮುಖಂಡು ಹಾಗೂ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.