Advertisement
ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿ ಅನುಷ್ಠಾನ, ಇಂದ್ರಧನುಷ್ ಅಭಿಯಾನ ಹಾಗೂ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯಾವುದೇ ಪ್ರಕರಣಗಳು ಕಂಡುಬಂದಿಲ್ಲ. ಆದರೆ, ನಮ್ಮ ನೆರೆಯ ದೇಶಗಳಾದ ಪಾಕಿಸ್ತಾನ ಹಾಗೂ ಆಫ್ಘಾನಿಸ್ತಾನದಲ್ಲಿ ಪೋಲಿಯೋ ವೈರಾಣುಗಳು ಕಂಡು ಬಂದಿರುವ ಹಿನ್ನೆಲೆ ನಮ್ಮಲ್ಲಿ ಎಚ್ಚರ ವಹಿಸುವುದು ತೀರಾ ಅಗತ್ಯವಾಗಿದೆ ಎಂದು ತಿಳಿಸಿದರು. ನಮ್ಮ ರಾಜ್ಯದಲ್ಲಿ 2007ರಲ್ಲಿ ಪೋಲಿಯೋ ರೋಗಾಣುವಿನಿಂದ ಬಾಧಿತವಾಗಿರುವ ಪ್ರಕರಣಗಳು ಕಂಡು ಬಂದಿಲ್ಲ. ಆದರೆ, ಹೊರ ದೇಶಗಳಿಂದ ವಲಸೆ ಬಂದಿರುವುದರಿಂದ ವೈರಾಣುಗಳು ಹರಡುವ ಸಾಧ್ಯತೆ ಇದೆ. ಅದನ್ನು ತಡೆಯಲು ಪೋಲಿಯೋ ಲಸಿಕೆಯನ್ನು ಹಾಕಲಾಗುತ್ತಿದೆ ಎಂದು ಹೇಳಿದರು. ಜಿಲ್ಲಾದ್ಯಂತ 5 ವರ್ಷದೊಳಗಿನ 84,804
ಮಕ್ಕಳನ್ನು ಗುರುತಿಸಲಾಗಿದೆ. ಅಲ್ಲದೇ, ಹೊರ ಜಿಲ್ಲೆಗಳಿಂದ ಬರುವ ಮಕ್ಕಳಿಗೆ ಲಸಿಕೆ ಹಾಕಿಸಲು ರೈಲ್ವೆ ಹಾಗೂ ಬಸ್ ನಿಲ್ದಾಣಗಳಲ್ಲಿ ಬೂತ್‌ಗಳನ್ನು ತೆರೆದು ಲಸಿಕೆಗಳನ್ನು ತಪ್ಪದೇ ಹಾಕಬೇಕು ಎಂದರು.
Related Articles
Advertisement
ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ ವರ್ಷದಲ್ಲಿ 2 ಬಾರಿ ನಡೆಯಲಿದ್ದು,ಮೊದಲನೆ ಹಂತ ಫೆ.10 ರಂದು ಚಾಲನೆಯಾಗಲಿದೆ. ಒಂದರಿಂದ 19 ವರ್ಷದೊಳಗಿನ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಜಂತು ಹುಳು ನಿವಾರಣಾ ಗುಳಿಗೆಯನ್ನು ನೀಡಲಾಗುವುದು ಎಂದು ತಿಳಿಸಿದರು. ಈ ಹಿಂದೆ ನಡೆದ ಜಂತು ಹುಳು ನಿವಾರಣಾ ಕಾರ್ಯಕ್ರಮದಲ್ಲಿ ಕೆಲವು ಖಾಸಗಿ ಶಾಲೆಗಳು
ಸಹಕಾರ ನೀಡದೇ ಇರುವ ಬಗ್ಗೆ ಕೇಳಿ ಬಂದಿದ್ದು, ಈ ಬಾರಿ ಇದಕ್ಕೆ ಆಸ್ಪದ ನೀಡದೇ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು. ಮಾತ್ರೆಗಳನ್ನು ಊಟದ ನಂತರದಲ್ಲಿಯೇ ನೀಡಬೇಕು. 5 ವರ್ಷದೊಳಗಿನ ಮಕ್ಕಳಿಗೆ ಗುಳಿಗೆಯನ್ನು ಇಡಿಯಾಗಿ ನೀಡಿದರೆ ಅವರಿಗೆ ತೊಂದರೆಯುಂಟಾಗುವ ಸಾಧ್ಯತೆ ಇರುವುದರಿಂದ ಬದಲಿ ವ್ಯವಸ್ಥೆಯನ್ನು ಕೈಗೊಳ್ಳಬೇಕು. ಕಾರ್ಯಕ್ರಮದ ಬಗ್ಗೆ ಶಾಲಾ ಶಿಕ್ಷಕರಿಗೆ ತರಬೇತಿ ನೀಡುವುದು ಅಗತ್ಯವಿದೆ ಎಂದರು. ರೋಗ ನಿರೋಧಕ ಚುಚ್ಚು ಮದ್ದುಗಳನ್ನು 6 ವರ್ಷಗಳೊಳಗಿನ ಮಕ್ಕಳಿಗೆ ನೀಡಲಾಗುತ್ತಿದ್ದು,
ಇವುಗಳಿಂದ ವಂಚಿತರಾದವರಿಗೆ ಚುಚ್ಚುಮದ್ದು ನೀಡಲು ಇಂದ್ರಧನುಷ್ ಅಭಿಯಾನ
ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ. ಇದನ್ನು ಯಶಸ್ವಿಗೊಳಿಸಲು ಮುಂದಾಗಬೇಕು ಎಂದರು. ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ| ಪ್ರಭು, ಜಿಲ್ಲಾ ಸರ್ಜನ್ ಕುಮಾರ್ ನಾಯಕ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರುಗೇಂದ್ರಪ್ಪ ಶಿರೋಳ್ಕರ್ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.