Advertisement

ಕ್ವಾರಂಟೈನ್‌ ಕೇಂದ್ರದಲ್ಲಿ ಸೌಲಭ್ಯ ಕೊರತೆ

06:35 PM Jul 02, 2020 | Naveen |

ಚಿಕ್ಕಮಗಳೂರು: ಕೋವಿಡ್ ಹಿನ್ನೆಲೆಯಲ್ಲಿ ತೆರೆಯಲಾಗಿರುವ ಕ್ವಾರಂಟೈನ್‌ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಉಂಟಾಗಿದೆ. ಕಾಂಗ್ರೆಸ್‌ ಮುಖಂಡರೊಬ್ಬರಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಕ್ವಾರಂಟೈನ್‌ ಕೇಂದ್ರದಲ್ಲಿ ಇರಿಸಲಾಗಿತ್ತು. ಅವರ ಕುಟುಂಬದವರನ್ನು ಹೋಮ್‌ ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು ಎಂದು ಕಾಂಗ್ರೆಸ್‌ ಮುಖಂಡ ಹಾಗೂ ಕೋವಿಡ್‌-19 ಕಾರ್ಯಪಡೆ ಅಧ್ಯಕ್ಷ ಎಂ.ಎಲ್‌. ಮೂರ್ತಿ ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ವಾರಂಟೈನ್‌ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ವಿರುದ್ಧ ಧ್ವನಿ ಎತ್ತಿದ ಕಾಂಗ್ರೆಸ್‌ ಮುಖಂಡರ ಕುಟುಂಬದ 74 ವರ್ಷದ ಹಿರಿಯರು ಮಗುವಿಗೆ ಹಾಲು ತರಲು ಹೋದಾಗ ಅವಕಾಶ ನೀಡಿಲ್ಲ. ಇದನ್ನು ಪ್ರಶ್ನಿಸಿದ್ದಕ್ಕೆ ಇಡೀ ಕುಟುಂಬವನ್ನೆ ಸರ್ಕಾರದ ನಿಯಮಕ್ಕೆ ವಿರುದ್ಧವಾಗಿ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲಾಯಿತು. ಅವರ ಕುಟುಂಬದವರಲ್ಲಿ ಕೊರೊನಾ ಸೋಂಕು ನೆಗೆಟಿವ್‌ ಬಂದಿದೆ ದ್ವೇಷದ ಹಿನ್ನೆಲೆಯಲ್ಲಿ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಿದ್ದು ಮಾಹಿತಿ ಹಕ್ಕಿನಡಿ ಮಾಹಿತಿ ಕೇಳಲಾಗುವುದು. ವೈದ್ಯರೊಬ್ಬರ ಮೇಲೆ ಖಾಸಗಿ ಪ್ರಕರಣ ದಾಖಲಿಸಲಾಗುವುದು ಎಂದರು.

ಜಿಲ್ಲೆಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದರಿಂದ ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ. ಕೋವಿಡ್ ಸೋಂಕಿನಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳುವುದ ಈ ಜಿಲ್ಲೆಗೆ ಬರುವ ಪ್ರವಾಸಿಗರನ್ನು ಹೊರಗೆಕಳುಹಿಸುವ ಕೆಲಸ ಮೊದಲು ಆಗಬೇಕಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next