Advertisement

ಚಿಕ್ಕಮಗಳೂರು: ಭಾರಿ ಮಳೆಗೆ ಧರೆಗುರುಳಿದ ಮರ… 2 ಗಂಟೆಗಳ ಕಾಲ ರಸ್ತೆ ಬಂದ್

01:20 PM Jul 04, 2023 | Team Udayavani |

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಕಳಸ ತಾಲೂಕಿನ ಚನ್ನಹಡ್ಲು ಗ್ರಾಮದಲ್ಲಿ ಭಾರಿ ಗಾತ್ರದ ಬೀಟೆ ಮರವೊಂದು ರಸ್ತೆ ಅಡ್ಡಲಾಗಿ ಉರುಳಿ ಬಿದ್ದು ಸುಮಾರು ಎರಡು ಗಂಟೆಗಳ ಕಾಲ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿರುವ ಘಟನೆ ನಡೆದಿದೆ.

Advertisement

ಮಲೆನಾಡಿನಾಡಿ ಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು ಈ ವೇಳೆ ಬೃಹತ್ ಗಾತ್ರದ ಬೀಟೆ ಮರ ಧರೆಗುರುಳಿವೆ, ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಮರ ತೆರವಿಗೆ ಗ್ರಾಮಸ್ಥರು ಮುಂದಾಗಿದ್ದಾರೆ.

ಸುಮಾರು ಎರಡು ಗಂಟೆಗಳ ಶ್ರಮದ ಬಳಿಕ ಮರವನ್ನು ತೆರವುಗೊಳಿಸಲಾಯಿತು, ಈ ವೇಳೆ ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳ ಸಂಚಾರ ಸಂಪೂರ್ಣ ಬಂದ್ ಆಗಿತ್ತು.

ಇದನ್ನೂ ಓದಿ: ಕಂಡಿಷನ್ ಇಲ್ಲದೆ ವಿವಿಧ ಗ್ಯಾರಂಟಿಗಳ ಅನುಷ್ಠಾನಕ್ಕೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ

Advertisement

Udayavani is now on Telegram. Click here to join our channel and stay updated with the latest news.

Next