Advertisement

ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು, ಓರ್ವ ಗಂಭೀರ

07:12 PM Dec 08, 2021 | Team Udayavani |

ಚಿಕ್ಕಮಗಳೂರು : ಬೊಲೆರೋ ಪಿಕಪ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಬುಧವಾರ ಸಂಜೆ ಸಂಭವಿಸಿದೆ.

Advertisement

ಚಿಕ್ಕಮಗಳೂರು ತಾಲೂಕಿನ ದೇವರಹಳ್ಳಿ ಗೇಟ್ ಬಳಿ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡವನ್ನು ಸ್ಥಳೀಯ ಆಸ್ಪತೆಗೆ ದಾಖಲಿಸಲಾಗಿದೆ.

ಮೃತರನ್ನು ಹಾಸನ ಜಿಲ್ಲೆ ಅರಸೀಕೆರೆ ಮೂಲದವರು ಎನ್ನಲಾಗಿದೆ ಚಿಕ್ಕಮಗಳೂರಿನಲ್ಲಿ ಕೆಲಸ ಮುಗಿಸಿ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಅಪಘಾತ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ

Advertisement
Advertisement

Udayavani is now on Telegram. Click here to join our channel and stay updated with the latest news.

Next