Advertisement

Chikkamagaluru: ಬಸ್ಸಿಗಾಗಿ ಕಾಯುತ್ತಿದ್ದ ಮಕ್ಕಳ ಮೇಲೆ ಹರಿದ ಬಸ್, ಇಬ್ಬರ ಸ್ಥಿತಿ ಗಂಭೀರ

11:26 AM Sep 07, 2023 | Team Udayavani |

ಮೂಡಿಗೆರೆ: ಬೆಳಿಗ್ಗೆ ಶಾಲೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳ ಮೇಲೆ ಖಾಸಗಿ ಬಸ್ಸೊಂದು ಹರಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ನಲ್ಲಿ ಗುರುವಾರ ಸಂಭವಿಸಿದೆ.

Advertisement

ಕಾವಲ್ ದುಗ್ಲಾಪುರ ಗೇಟ್ ನಲ್ಲಿ ಗುರುವಾರ ಬೆಳಿಗ್ಗೆ ಶಾಲೆಗೆ ತೆರಳಲು ಬಸ್ಸಿಗಾಗಿ ವಿದ್ಯಾರ್ಥಿಗಳು ಸೇರಿದಂತೆ ಕೆಲವು ಮಂದಿ ರಸ್ತೆ ಬದಿ ಕಾಯುತ್ತಿದ್ದರು ಈ ವೇಳೆ ಅತೀ ವೇಗವಾಗಿ ಬಂದ ಖಾಸಗಿ ಬಸ್ಸೊಂದು ರಸ್ತೆ ಬದಿ ನಿಂತಿತ್ತ ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದಿದೆ ಈ ವೇಳೆ ಇಬ್ಬರು ವಿದ್ಯಾರ್ಥಿನಿಯರು ಗಂಭೀರ ಗಾಯಗೊಂಡು ಐವರು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ,

ಅತಿವೇಗವಾಗಿ ಬರುತ್ತಿದ್ದ ಬಸ್ಸು ನಿಯಂತ್ರಣ ಕಳೆದು ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದು ಮುಂದೆ ಸಾಗಿ ರಸ್ತೆ ಬದಿಯ ಬಸ್ ನಿಲ್ದಾಣ ಹಾಗೂ ಮನೆಗಳತ್ತ ನುಗ್ಗಿದೆ, ಡಿಕ್ಕಿ ರಬಸಕ್ಕೆ ಮನೆಯ ಮುಂಭಾಗದ ಛಾವಣಿ ಸಂಪೂರ್ಣ ಜಖಂಗೊಂಡಿದೆ.

ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯರನ್ನು ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಖಾಸಗಿ ಬಸ್ಸುಗಳ ಅಟಾಟೋಪಕ್ಕೆ ಸ್ಥಳೀಯರ ಆಕ್ರೋಶ :
ಖಾಸಗಿ ಬಸ್ ಗಳು ಅತಿ ವೇಗದಿಂದ ಚಲಾಯಿಸುತ್ತಾರೆ ಇದರಿಂದ ಅನಾಹುತಗಳು ಸಂಭವಿಸುತ್ತಿದ್ದು ಖಾಸಗಿ ಬಸ್ಗಳ ವೇಗಕ್ಕೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಘಟನಾಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

ಘಟನೆ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: IPL 2024; ‘ಖಂಡಿತವಾಗಿಯೂ ಆಡುತ್ತೇನೆ..’: 8 ವರ್ಷದ ಬಳಿಕ ಆಡಲು ಬಂದ ಮಾಜಿ ಆರ್ ಸಿಬಿ ಆಟಗಾರ

Advertisement

Udayavani is now on Telegram. Click here to join our channel and stay updated with the latest news.

Next