Advertisement

ಚಿಕ್ಕಮಗಳೂರು: ಸರ್ಕಾರಕ್ಕೆ ರಕ್ತದಲ್ಲಿ ಪತ್ರ ಬರೆದ ಶ್ರೀಗಂಧ ಬೆಳೆಗಾರರು

02:35 PM Mar 30, 2022 | Team Udayavani |

ಚಿಕ್ಕಮಗಳೂರು: 62 ಕೋಟಿ ರೂ. ಪರಿಹಾರ ಕೊಡಬೇಕಾದ ಜಾಗಕ್ಕೆ ಕೇವಲ  ಎರಡೂವರೆ ಲಕ್ಷ ನೀಡಿದ ಸರ್ಕಾರದ ಕ್ರಮವನ್ನು ಖಂಡಿಸಿ  ಶ್ರೀಗಂಧದ ಬೆಳೆಗಾರರು ರಕ್ತದಲ್ಲಿ ಪತ್ರ ಬರೆದು ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹಳಿಯೂರು ಗ್ರಾಮದಲ್ಲಿ ಬುಧವಾರ ನಡೆದಿದೆ.

Advertisement

ಕಳೆದೊಂದು ತಿಂಗಳಿನಿಂದ ಅರೆಬೆತ್ತಲೆ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾಕಾರರು ಸೀರೆಂಜ್ ನಲ್ಲಿ ರಕ್ತ ತೆಗೆದು ಸರ್ಕಾರಕ್ಕೆ ಪತ್ರ ಬರೆದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಸಾಗರ: ಸಾಮಾನ್ಯ ಸಭೆಯಲ್ಲಿ ಹೆಲ್ಮೆಟ್ ಧರಿಸಿ ಪ್ರತಿಭಟಿಸಿದ ವಿರೋಧ ಪಕ್ಷದ ಕಾಂಗ್ರೆಸ್ ಸದಸ್ಯರು

ಹೆದ್ದಾರಿ ಅಗಲೀಕರಣದ ವೇಳೆ ಬೆಳೆಗಾರರು ಜಮೀನು ಕಳೆದುಕೊಳ್ಳಲಿದ್ದಾರೆ. 22 ರೈತರಿಗೆ 62 ಕೋಟಿ ಪರಿಹಾರ ಬರಬೇಕು. ಆದರೆ ಎರಡೂವರೆ ಲಕ್ಷ ಪರಿಹಾರ ನೀಡಲು ಸರ್ಕಾರ ಮುಂದಾಗಿದೆ. ಹೈಕೋರ್ಟ್ ನಿರ್ದೇಶನದಂತೆ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next