ಅಲ್ದೂರು : ಶಾಟ್೯ಸಕ್ಯೋಟ್ ನಿಂದ ಅಲ್ಟೋ ಕಾರೊಂದು ಹೊತ್ತಿ ಉರಿದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ವಸ್ತಾರೆ ಗ್ರಾಮದ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಆರೆನೂರು ಗ್ರಾಮದ ನಿವಾಸಿ ರಘು ಎಂದು ತಿಳಿದು ಬಂದಿದ್ದು ಕಾರಿನಲ್ಲಿ ಒಬ್ಬರೆ ಇದ್ದು ಚಿಕ್ಕಮಗಳೂರಿಗೆ ಹೋಗಿ ಆಲ್ದೂರಿಗೆ ಬರುವ ಮಾರ್ಗ ಮಧ್ಯೆ ಈ ದುರ್ಘಟನೆ ಸಂಭವಿಸಿದೆ.
ಕಾರಿಗೆ ಬೆಂಕಿ ಹಬ್ಬಿದ ಕೂಡಲೆ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರು ಸಾಧ್ಯವಾಗಲಿಲ್ಲ, ರಸ್ತೆ ಸಂಪೂರ್ಣ ಟ್ರಾಫಿಕ್ ಜ್ಯಾಮ್ ಆಗಿದ್ದು ನಂತರ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದು ಬೆಂಕಿ ನಂದಿಸಿ ಕಾರಿನಲಿದ್ದ ಮೃತದೇಹವನ್ನು ಹೊರತೆಗೆದು ವಾಹನಗಳ ಓಡಾಟ ಕ್ಕೆ ಅನುಕೂಲ ಮಾಡಿಕೊಟ್ಟರು.
ಇದನ್ನೂ ಓದಿ :ಎಚ್ಡಿಕೆ-ಸುಮಲತಾ ವಾಕ್ ಸಮರ ತಮಾಷೆಯಾಗಿದೆ, ಕೇಳಲು ನಮಗೆ ಸಮಯವಿಲ್ಲ : ಡಿಸಿಎಂ ಸವದಿ
ಮೃತ ವ್ಯಕ್ತಿ ರಘು ಕಾಫಿ, ಟಿಂಬರ್ ವ್ಯಾಪಾರ ಮಾಡುತ್ತಿದ್ದರು. ಘಟನಾ ಸ್ಥಳಕ್ಕೆ ಆಲ್ದೂರು ಪಿಎಸ್ಐ ಶಿವರುದ್ರಮ್ಮ ಹಾಗು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.