Advertisement

Chikkamagaluru: ಶ್ರೀರಾಮಸೇನೆಯಿಂದ ನಾಳೆ 21ನೇ ವರ್ಷದ ದತ್ತಮಾಲಾ ಅಭಿಯಾನ

05:46 PM Nov 09, 2024 | Team Udayavani |

ಚಿಕ್ಕಮಗಳೂರು: ಶ್ರೀರಾಮಸೇನೆಯಿಂದ ಹಮ್ಮಿಕೊಂಡಿರುವ 21ನೇ ವರ್ಷದ ದತ್ತಮಾಲಾ ಅಭಿಯಾನ ಭಾನುವಾರ(ನ10) ನಡೆಯಲಿದ್ದು, ರಾಜ್ಯದ ವಿವಿಧೆಡೆಯಿಂದ ಆಗಮಿಸುವ ದತ್ತಭಕ್ತರು ದತ್ತಪಾದುಕೆ ದರ್ಶನ ಪಡೆದುಕೊಳ್ಳಲಿದ್ದಾರೆ.

Advertisement

ದತ್ತಮಾಲಾ ಅಭಿಯಾನದ ಹಿನ್ನಲೆಯಲ್ಲಿ ದತ್ತದೀಪೋತ್ಸವ, ಪಡಿ ಸಂಗ್ರಹ ಕಾರ್ಯಗಳು ನಡೆದಿದ್ದು, ಭಾನುವಾರ ಬೆಳಗ್ಗೆ ನಗರದ ಶಂಕರಮಠ ಸಮೀಪದ ವೇದಿಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸೇರಿದಂತೆ ಸ್ವಾಮೀಜಿಗಳು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ.

ಸಭೆಯ ನಂತರ ಶಂಕರಮಠ ಸಮೀಪದಿಂದ ಬಸವನಹಳ್ಳಿ ಮುಖ್ಯರಸ್ತೆ, ಹನುಮಂತಪ್ಪ ವೃತ್ತ, ಎಂ.ಜಿ.ಎಸ್ತೆ ಮೂಲಕ ಆಜಾದ್ ಪಾರ್ಕ್ ವೃತ್ತದ ವರೆಗೂ ಶೋಭಾಯಾತ್ರೆ ನಡೆಯಲಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ದತ್ತಭಕ್ತರು ವಾಹನಗಳಲ್ಲಿ ದತ್ತಪೀಠಕ್ಕೆ ತೆಳುವರು.

ದತ್ತಪೀಠದಲ್ಲಿ ಸಮಾವೇಶಗೊಳ್ಳುವ ದತ್ತಭಕ್ತರು ಹೊನ್ನಮ್ಮನ ಹಳ್ಳದಲ್ಲಿ ಸ್ನಾನ ಮಾಡಿ ಅಲ್ಲಿಂದ ಕೆಲವರು ಕಾಲ್ನಡಿಗೆಯಲ್ಲಿ ಇನ್ನೂ ಕೆಲವರು ವಾಹನಗಳಲ್ಲಿ ದತ್ತಪೀಠಕ್ಕೆ ತೆರಳಿ ಅಲ್ಲಿ ಜರಗುವ ಹೋಮ ಹವನಗಳಲ್ಲಿ ಪಾಲ್ಗೊಂಡು ದತ್ತಪಾದುಕೆ ದರ್ಶನ ಪಡೆಯಲಿದ್ದಾರೆ. ಇದರೊಂದಿಗೆ ಶ್ರೀರಾಮ ಸೇನೆಯಿಂದ ಹಮ್ಮಿಕೊಂಡಿರುವ 21 ನೇ ವರ್ಷದ ದತ್ತಮಾಲಾ ಅಭಿಯಾನಕ್ಕೆ ತೆರೆ ಬೀಳಲಿದೆ.

Advertisement

ಪೊಲೀಸ್ ಇಲಾಖೆಯಿಂದ ಬೀಗಿ ಬಂದೋಬಸ್ತ್

ಶ್ರೀರಾಮಸೇನೆಯಿಂದ ಹಮ್ಮಿಕೊಂಡಿರುವ ದತ್ತಮಾಲಾ ಅಭಿಯಾನದ ಹಿನ್ನಲೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ದತ್ತಭಕ್ತರು ಆಗಮಿಸುವ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ಬಂದೋಬಸ್ತ್ ನಿಯೋಜಿಸಲಾಗಿದೆ. ದತ್ತಪೀಠ ಹಾಗೂ ಚಿಕ್ಕಮಗಳೂರು ನಗರದಲ್ಲಿ1700 ಕ್ಕೂ ಹೆಚ್ಚಿನ ಪೊಲೀಸರನ್ನು ಬಂದೋಬಸ್ತ್ ಗೆ ನಿಯೋಜಿಸಲಾಗಿದೆ.

ಎಸ್.ಪಿ. ಅಡಿಷನಲ್ ಎಸ್‌ಪಿ, 6 ಜನ ಡಿವೈಎಸ್‌ಪಿ, 15 ಜನ ಸಿಪಿಐ, 100 ಜನ ಪಿಎಸ್‌ಐ, 1500 ಜನ ಪೊಲೀಸ್ ಸಿಬ್ಬಂದಿ 8 ಕೆಎಸ್‌ಆರ್‌ಪಿ ತುಕಡಿ ಹಾಗೂ 11 ಡಿಎಆರ್ ತುಕಡಿ, ಕ್ಯೂಆರ್‌ಟಿ ಟೀಮ್ ಮತ್ತು 2 ಎಸಿ ಟೀಮ್ ನಿಯೋಜನೆ ಮಾಡ ಲಾಗಿದೆ. ದತ್ತಪೀಠದ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಜತೆಗೆ ದ್ರೋಣ್ ಕೆಮರಾಗಳ ಬಳಕೆ ಮಾಡಲಾಗುತ್ತಿದೆ.

ಪ್ರತಿವರ್ಷಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮರ, ದ್ರೋಣ್ ಕ್ಯಾಮರ ಬಳಸಲಾಗುತ್ತಿದೆ. ಬಾಟಲಿಗಳಲ್ಲಿ ಪೆಟ್ರೋಲ್ ನೀಡದಂತೆ ಪೆಟ್ರೋಲ್ ಬಂಕ್‌ಗಳಿಗೆ ಸೂಚನೆ ನೀಡಲಾಗಿದೆ. ಎಲ್ಲಾ ಸಂಘಟನೆಗಳೊಂದಿಗೆ ಚರ್ಚಿಸಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
-ಡಾ|ವಿಕ್ರಮ ಅಮಟೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next