Advertisement

ಕಾಫಿ ನಾಡಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಪನ್ನ

12:34 PM Jul 04, 2020 | Team Udayavani |

ಚಿಕ್ಕಮಗಳೂರು: ಕೋವಿಡ್ ಆತಂಕದ ನಡುವೆಯೂ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಶುಕ್ರವಾರ ಕಾಫಿ ನಾಡಿನಲ್ಲಿ ಸುಖಾಂತ್ಯ ಕಂಡಿತು. ಜೂ.25ರಿಂದ ಆರಂಭಗೊಂಡ ಪರೀಕ್ಷೆ ಸುಸೂತ್ರವಾಗಿ ನಡೆಯಿತು.

Advertisement

ಎಸ್ಸೆಸ್ಸೆಲ್ಸಿ ಕೊನೆಯ ದಿನದ ತೃತೀಯ ಭಾಷೆ ಹಿಂದಿ ಪರೀಕ್ಷೆಗೆ ಜಿಲ್ಲೆಯಲ್ಲಿ 12,303 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 12,187 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ, 116 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಪೈಕಿ ಕ್ವಾರಂಟೈನ್‌ ಪ್ರದೇಶದಿಂದ ಬಂದ 24 ವಿದ್ಯಾರ್ಥಿಗಳು ಹಾಗೂ ಅನಾರೋಗ್ಯದ ಕಾರಣದಿಂದ 39 ವಿದ್ಯಾರ್ಥಿಗಳು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದರು.

ಹಿಂದಿ ಪರೀಕ್ಷೆಗೆ 551 ವಲಸೆ ವಿದ್ಯಾರ್ಥಿಗಳು ನೋಂದಾಯಿಸಿ ಕೊಂಡಿದ್ದರು. ಓರ್ವ ವಿದ್ಯಾರ್ಥಿ ಮಾತ್ರ ಗೈರು ಹಾಜರಾಗಿದ್ದ. ಪರೀಕ್ಷಾ ಕೇಂದ್ರದ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಜೆರಾಕ್ಸ್‌ ಅಂಗಡಿಗಳನ್ನು ಮುಚ್ಚಲಾಗಿತ್ತು. ಜಿಲ್ಲೆಯಲ್ಲಿ ಕೋವಿಡ್ ಭೀತಿ ಇದ್ದರು ವಿದ್ಯಾರ್ಥಿಗಳು ಜಿಲ್ಲೆಯ 58 ಪರೀಕ್ಷಾ ಕೇಂದ್ರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಉತ್ಸಾಹದಿಂದಲೇ ಬರೆದರು. ವಿದ್ಯಾರ್ಥಿ ಗಳು ಪರೀಕ್ಷಾ ಕೇಂದ್ರಗಳಿಗೆ ಬರಲು ಕೆಎಸ್‌ ಆರ್‌ಟಿಸಿ ಬಸ್‌ ಸೌಲಭ್ಯ ಕಲ್ಪಿಸಲಾಗಿತ್ತು.

ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ಣಗೊಂಡಿದ್ದು, ಯಶಸ್ಸಿಗೆ ಸಹಕರಿಸಿದ ಎಲ್ಲಾ ವಿದ್ಯಾರ್ಥಿ ಗಳು ಮತ್ತು ಪೋಷಕರು, ಆರೋಗ್ಯ, ಪೊಲೀಸ್‌ ಇಲಾಖೆ, ಸ್ಕೌಟ್ಸ್‌ ಮತ್ತು ಗೈಡ್ಸ್‌, ಸೇವಾದಳ ಮತ್ತು ಇತರೆ ಸಂಘ- ಸಂಸ್ಥೆಗಳು ಜನಪ್ರತಿನಿಧಿಗಳು, ಜಿಲ್ಲಾಡ ಳಿತ, ಜಿಪಂ, ಶಾಲಾ ಆಡಳಿತ ಮಂಡಳಿ, ಖಜಾನೆ, ಸಾರಿಗೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಶಿಕ್ಷಕರು, ಸಿಬ್ಬಂದಿ, ಅಧಿಕಾರಿ ವರ್ಗ ಸೇರಿದಂತೆ ಎಲ್ಲರಿಗೂ ಡಿಡಿಪಿಐ ಸಿ.ನಂಜಯ್ಯ ಕೃತಜ್ಞತೆ ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next