Advertisement
ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ 2020ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಒಟ್ಟು 58 ಪರೀಕ್ಷಾ ಕೇಂದ್ರಗಳಲ್ಲಿ 6,301 ವಿದ್ಯಾರ್ಥಿಗಳು ಮತ್ತು 6,077 ವಿದ್ಯಾರ್ಥಿನಿಯರು ಸೇರಿದಂತೆ ಹೊಸ 12,378 ವಿದ್ಯಾರ್ಥಿಗಳು, ಖಾಸಗಿ ವಿದ್ಯಾರ್ಥಿಗಳು 284, ಪುನರಾವರ್ತಿತ 561 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 13,328ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಹೇಳಿದರು.
Related Articles
Advertisement
ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲೂ ಪ್ರಾಥಮಿಕ ಚಿಕಿತ್ಸೆ ನೀಡುವ ಮೆಡಿಕಲ್ ಕಿಟ್ ಒಳಗೊಂಡಂತೆ ಆರೋಗ್ಯ ಸಹಾಯಕರನ್ನು ನೇಮಿಸಬೇಕೆಂದು ಆರೋಗ್ಯ ಇಲಾಖಾ ಅಧಿ ಕಾರಿಗಳಿಗೆ ಸೂಚಿಸಿದರು. ಯಾರೊಬ್ಬರು ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳನ್ನು ಒಯ್ಯುವುದು ಸೇರಿದಂತೆ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಈ ಬಗ್ಗೆ ಉಸ್ತುವಾರಿ ವಹಿಸಲು ಮೊಬೈಲ್ ಸ್ವಾಧೀನಾಧಿಕಾರಿಯನ್ನು ನೇಮಿಸಲಾಗಿದೆ ಎಂದರು.
ಸಹ ನಿರ್ದೇಶಕರು ಮತ್ತು ಪದನಿಮಿತ್ತ ಜಂಟಿ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಮೈಸೂರು ವಿಭಾಗ ರಾಜೇಂದ್ರ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷೆ ಭಯವಿಲ್ಲದಂತೆ ಮುಕ್ತ ವಾತವರಣದಲ್ಲಿ ಪರೀಕ್ಷೆ ಬರೆಯುವಂತಾಗಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಪರೀಕ್ಷೆಗೆ ಬರುವ ವಿದ್ಯಾರ್ಥಿಗನ್ನು ನಗುಮೊಗದಿಂದ ಅವರನ್ನು ಆಹ್ವಾನಿಸಿ ಪಾರದರ್ಶಕವಾಗಿ ಪರೀಕ್ಷೆ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಶಿವಮೊಗ್ಗ ಡಯತ್ ಪ್ರಾಂಶುಪಾಲರಾದ ಸುಮಂಗಲಾ ವಿ.ಕುಚ್ಚಿನಾಡ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿ ಕಾರಿ ಎಸ್.ಪೂವಿತಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಶೃತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಭರತ್, ನೋಡಲ್ ಅಧಿ ಕಾರಿ ಜಯಣ್ಣ, ಸುಮಂಗಳಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ನಂಜಯ್ಯ, ಪ್ರೌಢಶಾಲೆ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.