Advertisement

8-9 ರಂದು ರಾಜ್ಯಮಟ್ಟದ ಚೆಸ್‌ ಪಂದ್ಯಾವಳಿ

05:00 PM Nov 06, 2019 | Naveen |

ಚಿಕ್ಕಮಗಳೂರು: ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಚೆಸ್‌ ಪಂದ್ಯಾವಳಿ ನ.8 ಮತ್ತು 9 ರಂದು ನಗರದಲ್ಲಿ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ನಾಗರಾಜ್‌ ತಿಳಿಸಿದರು.

Advertisement

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಎಂಇಎಸ್‌ ಕಾಲೇಜಿನಲ್ಲಿ ನಡೆಯಲಿರುವ ಪಂದ್ಯಾವಳಿಯನ್ನು ನ.8 ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಉದ್ಘಾಟಿಸುವರು ಎಂದರು.

ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ರಾಜ್ಯದ 32 ಜಿಲ್ಲೆಗಳಿಂದ ಬಾಲಕ ಮತ್ತು ಬಾಲಕಿಯರ ತಂಡಗಳು ಪಾಲ್ಗೊಳ್ಳಲಿವೆ. ಪ್ರತಿ ತಂಡದಲ್ಲಿ 5 ಜನ ಸ್ಪರ್ಧಾಳುಗಳು ಇರಲಿದ್ದು, 2 ವ್ಯವಸ್ಥಾಪಕರು ಸೇರಿ ಒಟ್ಟಾರೆ 384 ಜನ ಬರಲಿದ್ದಾರೆ.

ಪಂದ್ಯಾವಳಿಯಲ್ಲಿ ವಿಜೇತರಾದವರು ರಾಷ್ಟ್ರ ಮಟ್ಟದ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವರು ಎಂದು ತಿಳಿಸಿದರು.

ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬ ಸ್ಪರ್ಧಾಳುವಿಗೂ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಬಾಲಕರಿಗೆ ನಗರದ ಜೆ.ವಿ.ಎಸ್‌. ಶಾಲೆಯಲ್ಲಿ, ಬಾಲಕಿಯರಿಗೆ ಬಸವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಬ್ಬ ಕ್ರೀಡಾಪಟುವಿಗೂ ಸರ್ಕಾರದ ವತಿಯಿಂದ ಟಿ.ಎ. ಮತ್ತು ಡಿ.ಎ. ಕೊಡಲಾಗುವುದು. ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದಲೇ ಎಲ್ಲರಿಗೂ ಊಟ ಮತ್ತು ಉಪಾಹಾರದ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

Advertisement

ಕ್ರೀಡಾಪಟುಗಳು ನ.7ರಂದೇ ನಗರಕ್ಕೆ ಆಗಮಿಸಲಿದ್ದಾರೆ. ಅಂದು ಸಂಜೆ ಸ್ಪರ್ಧಾಳುಗಳು ಎಂಇಎಸ್‌ ಕಾಲೇಜಿನಲ್ಲಿ ನೋಂದಣಿ ಮಾಡಿಕೊಳ್ಳುವರು. ನ.8 ರಂದು ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ವಿಧಾನ ಪರಿಷತ್‌ ಉಪಸಭಾಪತಿ ಎಸ್‌.  ಎಲ್‌.ಧರ್ಮೇಗೌಡ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು, ವಿಧಾನಪರಿಷತ್‌ ಸದಸ್ಯರು, ಸಂಸದರು, ಜಿ.ಪಂ. ಅಧ್ಯಕ್ಷರು, ತಾ.ಪಂ. ಅಧ್ಯಕ್ಷರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿರುವರು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next