Advertisement
ಭಾನುವಾರ ಬೆಳಗ್ಗೆಯಿಂದಲೇ ಜನ ಮತ್ತು ವಾಹನ ಸಂಚಾರಕ್ಕೆ ಕಡಿವಾಣ ಹಾಕಲಾಯಿತು. ದಿನಸಿ ಅಂಗಡಿಗಳು ಸೇರಿದಂತೆ ಮೀನು ಮಾಂಸ ಮಾರುಕಟ್ಟೆಯನ್ನು ತೆರಯಲಾಗಿತ್ತು. ಜನದಟ್ಟಣೆ ಹೆಚ್ಚುತ್ತಿದ್ದ ಹಿನ್ನೆಲೆಯಲ್ಲಿ ದಿನಸಿ ಅಂಗಡಿ ಮತ್ತು ಮೀನು, ಮಾಂಸ ಮಾರುಕಟ್ಟೆಯನ್ನು ಪೊಲೀಸರು ಬಂದ್ ಮಾಡಿಸಿದರು. ನಗರದ ಎಂ.ಜಿ. ಎಸ್ತೆ, ಐ.ಜಿ. ರಸ್ತೆ, ಮಾರ್ಕೆಟ್ ರಸ್ತೆ, ಬಸವನಹಳ್ಳಿ ಮುಖ್ಯರಸ್ತೆ, ವಿಜಯಪುರ ರಸ್ತೆಗಳಲ್ಲಿ ಜನಸಂಚಾರವಿಲ್ಲದೆ ರಸ್ತೆಗಳು ಬಿಕೋ ಎನ್ನುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಪ್ರಮುಖ ರಸ್ತೆಗಳಲ್ಲಿರುವ ಬಟ್ಟೆ ಅಂಗಡಿ, ಗೃಹೋಪಯೋಗಿ ವಸ್ತುಗಳ ಅಂಗಡಿ, ಮೊಬೈಲ್ ಶಾಪ್ ಗಳನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು. ಮೆಡಿಕಲ್ ಶಾಪ್ ಹಾಗೂ ಪೊಟ್ರೋಲ್ ಬಂಕ್, ಎಟಿಎಂಗಳು ಆಸ್ಪತ್ರೆಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.
ಅಗತ್ಯ ವಸ್ತುಗಳ ಮಾರಾಟ ಮಳಿಗೆಗಳು ತೆರೆಯಲಿದ್ದು ಉಳಿದಂತೆ ಎಲ್ಲಾ ವ್ಯಾಪಾರ- ವಹಿವಾಟುಗಳು ಸಂಪೂರ್ಣ ಬಂದ್ ಆಗಲಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದರು. ಭಾನುವಾರ ಲಾಕ್‌ಡೌನ್‌ಗೆ ಕಾರ್ಯ ಪ್ರವೃತ್ತರಾದ ಪೊಲೀಸ್ ಸಿಬ್ಬಂದಿ ಅಗತ್ಯ ವಸ್ತುಗಳ ಮಾರಾಟ ಮಳಿಗೆಗಳನ್ನು ಬಂದ್ ಮಾಡಿಸಿದರು. ಇದರಿಂದ ಅಗತ್ಯ ವಸ್ತುಗಳ ಖರೀದಿಗೆ ಬಂದಿದ್ದ ಗ್ರಾಹಕರು ಮತ್ತು ಅಂಗಡಿ ಮಾಲೀಕರಲ್ಲಿ ಗೊಂದಲಕ್ಕೆ ಕಾರಣವಾಗಿತ್ತು.