Advertisement

Chikkamagaluru; ವಿಳಾಸ ಕೇಳುವ ನೆಪದಲ್ಲಿ ವೃದ್ಧೆಯ ಸರ ಎಗರಿಸಿದ ಸರಗಳ್ಳರು

06:09 PM Jun 12, 2023 | Team Udayavani |

ಚಿಕ್ಕಮಗಳೂರು: ವಿಳಾಸ ಕೇಳುವ ನೆಪದಲ್ಲಿ ಹಾಡಹಗಲೇ ಸರಗಳ್ಳರು ವೃದ್ಧೆಯ ಸರ ಎಗರಿಸಿದ ಘಟನೆ ನಗರದ ಕೋಟೆ ಬಡಾವಣೆಯ ಸುಗ್ಗಿಕಲ್ ರಸ್ತೆಯಲ್ಲಿ ನಡೆದಿದೆ.

Advertisement

ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ನಿವಾಸಿ ಲೀಲಾವತಿ ಚಿನ್ನದ ಸರ ಕಳೆದುಕೊಂಡವರಾಗಿದ್ದು, ವೇಗವಾಗಿ ಬೈಕಿನಲ್ಲಿ ಬಂದು ಕೊರಳಲ್ಲಿದ್ದ ಸರ ಎಗರಿಸಿ ಕಳ್ಳರು ಪರಾರಿಯಾಗಿದ್ದಾರೆ.

ಸುಗ್ಗಿಕಲ್ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಸರಗಳ್ಳತನ ನಡೆದಿದ್ದು, ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಘಟನೆ ಬಳಿಕ ಮಹಿಳೆಯರಲ್ಲಿ ಆತಂಕ ನಿರ್ಮಾಣವಾಗಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next