Advertisement
ನಗರದ ಜಿಪಂ ಸಭಾಂಗಣದಲ್ಲಿ ಜೆಸಿಐ ಶೃಂಗೇರಿ ಘಟಕ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆ ನಿಲಯದ ಪ್ರಾಂಶುಪಾಲರು, ನಿಲಯ ಪಾಲಕರು, ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿಗೆ ಆಯೋಜಿಸಿದ್ದ ಶಿಕ್ಷಕರಿಗೆ ಯಶಸ್ಸಿನ ಸೂತ್ರಗಳು ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.
Related Articles
Advertisement
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಪೂವಿತಾ ಮಾತನಾಡಿ, ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆ, ಯೋಗಕ್ಷೇಮ, ಉತ್ತಮ ಶಿಕ್ಷಣ ನೀಡುವ ಹೊಣೆ ನಿಲಯಪಾಲಕರದ್ದಾಗಿದೆ. ಸುರಕ್ಷತೆ ದೃಷ್ಟಿಯಿಂದ ರಾತ್ರಿ ವೇಳೆಯಲ್ಲಿ ನಿಲಯ ಪಾಲಕರು ಕಡ್ಡಾಯವಾಗಿ ಹಾಸ್ಟೆಲ್ನಲ್ಲಿಯೇಉಳಿದುಕೊಳ್ಳುವಂತೆ ಸೂಚಿಸಿದರು. ಯಾವುದೇ ವಸತಿ ನಿಲಯಗಳಲ್ಲಿ ಮೂಲಭೂತ ಸೌಕರ್ಯ, ದುರಸ್ತಿ ಕಾರ್ಯಗಳಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ನನ್ನ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬೇಕು. ಮಕ್ಕಳ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾವಹಿಸಲು ಅವಕಾಶ ನೀಡಬೇಕು ಎಂದರು. ವಿದ್ಯಾರ್ಥಿನಿಯರ ವಸತಿ ನಿಲಯಗಳಲ್ಲಿ ವಾರ್ಡನ್‌ಗಳು ವಿದ್ಯಾರ್ಥಿಗಳ ಓದಿನ ಜೊತೆಗೆ ಸುರಕ್ಷತೆ, ಶುಚಿತ್ವದ ಬಗ್ಗೆ ಮಾರ್ಗದರ್ಶನ ನೀಡಬೇಕು. ಮುಂದಿನ ದಿನಗಳಲ್ಲಿ ಪ್ರತಿ ಹಾಸ್ಟೆಲ್‌ಗಳಿಗೂ ಭೇಟಿ ಪರಿಶೀಲನೆ ನಡೆಸುವುದಾಗಿ ತಿಳಿಸಿದರು. ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಜಸಿಂತಾ ಅನಿಲ್‌ಕುಮಾರ್ ಮಾತನಾಡಿ, ಸರ್ಕಾರ ನೀಡುವ ಸವಲತ್ತುಗಳನ್ನು ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ನಿಲಯ ಪಾಲಕರು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ಜೊತೆಗೆ ಗುಣಮಟ್ಟದ ಆಹಾರ, ಶುಚಿತ್ವ, ಆರೋಗ್ಯದ ಬಗ್ಗೆ ಅರಿವು ಮೂಡಿಸಬೇಕು ಎಂದರು. ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಜೆಸಿಐ ಅಧ್ಯಕ್ಷ ಶೃಂಗೇರಿ ಶಿವಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ತರಬೇತಿ ಕಾರ್ಯಕ್ರಮಗಳು ಸರ್ಕಾರಿ ಅಧಿಕಾರಿಗಳು ಸದುಪಯೋಗಪಡಿಸಿಕೊಳ್ಳಬೇಕು. ಸಂಸ್ಥೆಯಿಂದ 25ನೇ ತರಬೇತಿ ಕಾರ್ಯಾಗಾರ ನಡೆದಿದ್ದು, ನಮ್ಮಲ್ಲಿನ ಶಕ್ತಿಯನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂಬುದು ಕಾರ್ಯಾಗಾರದ ಉದ್ದೇಶವಾಗಿದೆ ಎಂದರು. ಕಾರ್ಯಕ್ರಮದಲ್ಲಿ ನಿರೀಕ್ಷೆ, ಮಧುಬನಿ ಪುಸ್ತಕ ಲೋಕಾರ್ಪಣೆಗೊಳಿಸಿದರು. ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿ, ರಾಷ್ಟ್ರೀಯ ತರಬೇತುದಾರ ಎನ್. ಕೆ.ವಿಜಯ್‌ಕುಮಾರ್ ವಿದ್ಯಾಥಿಗಳ ವ್ಯಕ್ತಿತ್ವ ವಿಕಸನ, ಶೈಕ್ಷಣಿಕ ಮಾರ್ಗದರ್ಶನ, ಶಿಕ್ಷಕರ ಪಾತ್ರ ಕುರಿತು ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ಜಿಪಂ ಸದಸ್ಯೆ ಲೋಲಾಕ್ಷಿ ಬಾಯಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ಸಮಗ್ರ ಗಿರಿಜನ ಅಭಿವೃದ್ಧಿ ಅಧಿಕಾರಿ ಹಟ್ಟಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಸೋಮಶೇಖರ್, ತರಬೇತಿ ವಿಭಾಗದ ಉಪಾಧ್ಯಕ್ಷ ಸುಜನ್ ಉಪಸ್ಥಿತರಿದ್ದರು.