ಚಿಕ್ಕಮಗಳೂರು: ಸರಕಾರಿ ಬಸ್ ಢಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ದಾರುಣವಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಎಪಿಎಂಸಿ ಬಳಿ ಗುರುವಾರ ನಡೆದಿದೆ.
Advertisement
ನಗರದ ದಂಟರಮಕ್ಕಿ ನಿವಾಸಿ ಶ್ರೀಧರ್, ಹಿರೇಮಗಳೂರು ನಿವಾಸಿ ದಯಾನಂದ್ ಮೃತ ದುರ್ದೈವಿಗಳು. ಘಟನೆ ಬಳಿಕ ಕೆಎಸ್ ಆರ್ ಟಿಸಿ ಬಸ್ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾನೆ.
ಸ್ಕೂಟರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ ಚಾಲಕನ ವಿರುದ್ಧ ಸ್ಥಳಿಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.