Advertisement
ಚಿಕ್ಕಮಗಳೂರು ನಗರ ಪ್ರದೇಶದಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಅಮೃತ್ ಕುಡಿಯುವ ನೀರು ಯೋಜನೆ ಮತ್ತು ಒಳಚರಂಡಿ ಕಾಮಗಾರಿ ವಿಳಂಬವಾಗುತ್ತಿದೆ. ಇದರಿಂದ ಜನಸಾಮಾನ್ಯರಿಗೆ ಅನಾನುಕೂಲವಾಗುತ್ತಿದೆ. ಈ ಕಾಮಗಾರಿಗಳನ್ನು ನಿಗದಿತ ಕಾಲಾವಧಿಯೊಳಗೆ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಟೆಂಡರ್ ನಿಬಂಧನೆಗಳಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಚಿಕ್ಕಮಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಒಳಚರಂಡಿ ಯೋಜನೆಯಡಿ ನಿರ್ಮಾಣ ಮಾಡಲು ಬಾಕಿ ಇರುವ ಯುಜಿಡಿ ಮ್ಯಾನ್‌ಹೋಲ್‌ಗಳ ನಿರ್ಮಾಣ ಕಾರ್ಯ ವಿಳಂಬವಾಗುತ್ತಿದೆ.
Related Articles
Advertisement
ಅಮೃತ್ ಕುಡಿಯುವ ನೀರು ಯೋಜನೆ ಕಾಮಗಾರಿಯನ್ನು 23 ವಲಯಗಳಾಗಿ ಗುರುತಿಸಿದ್ದು, 8 ವಲಯಗಳಲ್ಲಿ ಕಾಮಗಾರಿಯನ್ನು ಸಂಪೂರ್ಣಗೊಳಿಸಲಾಗಿದೆ. ಈ ತಿಂಗಳ ಒಳಗಾಗಿ 4 ವಲಯಗಳಲ್ಲಿ ಪ್ರಾಯೋಗಿಕವಾಗಿ ಚಾಲನೆ ನೀಡಲಾಗುವುದು ಎಂದರು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೆಲವು ಕಡೆಗಳಲ್ಲಿ ನಿಧಾನ ಗತಿಯಲ್ಲಿ ನಡೆಯುತ್ತಿದ್ದು ಕಾಮಗಾರಿ ಚುರುಕುಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ ಅವರು, ಎಐಟಿ ಅಧಿಕೃತದಿಂದ ಹಿರೇಮಗಳೂರು ಒರೆಗಿನಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ಈಗಾಗಲೇ ಚರಂಡಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಅನ್ವಯದಿಂದ ಕಾರ್ಯ ನಿರ್ವಹಿಸಬೇಕೆಂದರು.
ಸಭೆಯಲ್ಲಿ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾ ಧಿಕಾರದ ಆಯುಕ್ತ ಹಾಗೂ ನಗರಸಭೆ ಆಯುಕ್ತರಾದ ಬಿ. ಸಿ. ಬಸವರಾಜ್, ಜಿಲ್ಲಾ ನಗರಾಭಿವೃದ್ಧಿ ಕೋಶಾಧಿಕಾರಿ ಮೋಹನ್, ಒಳಚರಂಡಿ ಮಂಡಳಿ ಕಾರ್ಯಪಾಲಕ ಅಭಿಯಂತರ ಜಗದೀಶ್, ನಗರ ನೀರು ಸರಬರಾಜು ಮಂಡಳಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಲ್ಲೇಶ್‌ನಾಯಕ್ ಇತರರು ಇದ್ದರು.
ಇದನ್ನೂ ಓದಿ : ಬೆಲೆ ಏರಿಕೆಗೆ ಬಿಜೆಪಿ ಕಾರಣವಲ್ಲ: ಡಾ.ಅಶ್ವತ್ಥನಾರಾಯಣ