ಬಾಳೆಹೊನ್ನೂರು: ಹಾಸನ ಜಿಲ್ಲೆ ಬೇಲೂರಿನಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳ 30ನೇ ವರ್ಷದ ಶರನ್ನವರಾತ್ರಿ ದಸರಾ ಮಹೋತ್ಸವ ನಡೆಸಲು ನಿರ್ಧರಿಸಲಾಗಿದ್ದನ್ನು ಕೊರೊನಾ ಸೋಂಕಿನ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮುಂದೂಡಿ 2022ನೇ ಸಾಲಿನಲ್ಲಿ ಆಚರಿಸಲು ಬಾಳೆಹೊನ್ನೂರು ಧರ್ಮಪೀಠದಲ್ಲಿ ಜರುಗಿದ ಬೇಲೂರು ದಸರಾ ಪೂರ್ವಭಾವಿ ಸಮಾವೇಶದಲ್ಲಿ ನಿರ್ಧರಿಸಲಾಯಿತು.
2021ರ ದಸರಾ ಆಚರಣೆಯನ್ನು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಕಡೇನಂದಿಹಳ್ಳಿ ಶ್ರೀ ಜಗದ್ಗುರು ರೇವಣಸಿದ್ಧೇಶ್ವರ ಪುಣ್ಯಾಶ್ರಮದಲ್ಲಿ ಅ. 7ರಿಂದ ಅ. 15 ರ ವರೆಗೆ ಸಾಂಪ್ರದಾಯಿಕವಾಗಿ ಆಚರಿಸುವ ನಿರ್ಧಾರವನ್ನು ಶ್ರೀ ರಂಭಾಪುರಿ ಡಾ| ವೀರಸೋಮೇಶ್ವರ ಜಗದ್ಗುರುಗಳು ತಿಳಿಸಿದರು.
ಕೊರೊನಾ ಕಾರಣದಿಂದ ಸಮಾರಂಭದಲ್ಲಿ ಪಾಲ್ಗೊಳ್ಳುವವರ ಸಂಖ್ಯೆಯನ್ನು ಮಿತಗೊಳಿಸಲಾಗಿದೆ. ಸಮಾರಂಭದಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಕಾರ್ಜುವಳ್ಳಿ ಸದಾಶಿವ ಶಿವಾಚಾರ್ಯ ಸ್ವಾಮಿಗಳು, ಬೇಲೂರು ಕ್ಷೇತ್ರದ ಶಾಸಕ ಕೆ.ಎಸ್. ಲಿಂಗೇಶ, ಬಿಜೆಪಿ ಧುರೀಣ ಕೊರಟಗೆರೆ ಪ್ರಕಾಶ, ಹಾಸನ ವೀರಶೈವ ಸಂಘದ ಅಧ್ಯಕ್ಷ ಬಿ.ಪಿ. ಐಸಾಮಿ ಗೌಡರು, ಬೇಲೂರು ವೀರಶೈವ ಸಮಾಜದ ಅಧ್ಯಕ್ಷ ರವಿಕುಮಾರ, ವೀರಶೈವ ಮಹಾಸಭಾದ ಮಹಿಳಾ ಘಟಕದ ಮುಖ್ಯಸ್ಥೆ ಚಂದ್ರಕಲಾ, ಹಾಸನ ಜಿಪಂ ಸದಸ್ಯೆ ರತ್ನಮ್ಮ ಐಸಾಮಿಗೌಡರು, ಯುವ ಧುರೀಣ ಸಂತೋಷ, ಮಹದೇವ, ರೇಣುಕ ಕುಮಾರ, ದಿಲೀಪಕುಮಾರ, ನಟರಾಜ ಇತರರು ಇದ್ದರು.
ಈಗಾಗಲೇ ಕಡೆನಂದಿಹಳ್ಳಿ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು ಸರಳ ಸಂಪ್ರದಾಯಿಕ ದಸರಾ ಆಚರಣೆಯ ಸಿದ್ಧತೆಯನ್ನು ಶ್ರೀ ಜಗದ್ಗುರು ರೇವಣಸಿದ್ಧೇಶ್ವರ ಪುಣ್ಯಾಶ್ರಮದಲ್ಲಿ ತಮ್ಮ ಭಕ್ತರೊಡಗೂಡಿ ಕಾರ್ಯಕ್ರಮ ಸಂಯೋಜಿಸುತ್ತಿದ್ದಾರೆ ಎಂದು ತಿಳಿಸಿದರು.