Advertisement

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆಯ ಭೀಕರ ಸಾವು

08:58 AM Nov 20, 2022 | Team Udayavani |

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಹುಲೇಮನೆ ಕುಂದೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಮಹಿಳೆ ಸಾವನ್ನಪ್ಪಿದ್ದಾರೆ.  45 ವರ್ಷದ ಶೋಭಾ ಅಮೃತ ದುರ್ದೈವಿಯಾಗಿದ್ದು, ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು ಜನರು ಆತಂಕದಲ್ಲಿ ಬದುಕು ಸಾಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಕಾಡಾನೆಗಳು ಮನೆ ಸಮೀಪವೇ ಬರುತ್ತಿದ್ದು ಜನರು ಭಯಭೀತರಾಗಿದ್ದಾರೆ.

Advertisement

ಜಾನುವಾರುಗಳಿಗೆ ಹುಲ್ಲು ತರಲು ಹೋದಾಗ ಶೋಭಾ ಎಂಬ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿದ್ದು  ಮಹಿಳೆಯ ಶವವನ್ನು ಕಾಡಾನೆ ನಜ್ಜುಗುಜ್ಜು ಮಾಡಿದೆ. ಗ್ರಾಮಸ್ಥರು ಭಯ ಬೀತರಾಗಿದ್ದು ಹಾಡು ಹಗಲೇ ನಡೆದ ಘಟನೆಗೆ ಅರಣ್ಯ ಇಲಾಖೆಯ ಬೇಜವಾಬ್ದಾರಿತನವೇ ಕಾರಣ ಎಂದು ಆರೋಪಿಸಿದ್ದಾರೆ.

ಅರಣ್ಯ ಇಲಾಖೆ ಸಾರ್ವಜನಿಕರು ತಿಳಿಸಿದಾಗಲೇ ಅವುಗಳನ್ನು ಕಾಡಿಗಟ್ಟಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next