Advertisement

ಸ್ವಚ್ಛ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ

03:32 PM Feb 05, 2020 | Naveen |

ಚಿಕ್ಕಮಗಳೂರು: ಸಮರ್ಪಕ ಘನತ್ಯಾಜ್ಯ ವಿಲೇವಾರಿ ಮಾಡದಿದ್ದರೆ ಅನೇಕ ರೋಗಗಳು ನಮ್ಮನ್ನು ಬಾಧಿಸುತ್ತವೆ. ರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ನಮ್ಮ ನಗರ ಮತ್ತು ಮನೆಯ ಸುತ್ತಮುತ್ತಲ ಪರಿಸರ ಸ್ವತ್ಛವಾಗಿಟ್ಟುಕೊಂಡು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ಜಿಲ್ಲಾ ಕಾನೂನು  ಪ್ರಾ ಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜು ಚೇಂಗಟಿ ಕರೆ ನೀಡಿದರು.

Advertisement

ಮಂಗಳವಾರ ನಗರದ ನಗರಸಭೆ ಸಭಾಂಗಣದಲ್ಲಿ ನಗರಸಭೆ ವತಿಯಿಂದ ಬೇಕರಿ ಮಾಲೀಕರಿಗೆ ಆಯೋಜಿಸಿದ್ದ ಘನತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ತ್ಯಾಜ್ಯಕಸ ಕ್ಯಾನ್ಸರ್‌ ರೋಗದಂತೆ ನಮ್ಮನ್ನು ಬಾಧಿಸುತ್ತಿದೆ. ಎಲ್ಲೆಂದರಲ್ಲಿ ಕಸ ಹಾಕುವುದರಿಂದ ನಗರದ ಸೌಂದರ್ಯವನ್ನು ಹಾಳು ಮಾಡುವುದಲ್ಲದೇ ರೋಗರುಜೀನಗಳು ಹಬ್ಬುತ್ತವೆ. ಆದ್ದರಿಂದ ಎಲ್ಲೆಂದರಲ್ಲಿ ಕಸ ಹಾಕದೆ ನಗರಸಭೆ ವಾಹನಗಳಿಗೆ ಕಸ ನೀಡಬೇಕು ಎಂದು ತಿಳಿಸಿದರು.

ಪ್ರಭಾರಿ ಪೌರಾಯುಕ್ತ ಹಾಗೂ ನಗರ ಯೋಜನಾ ನಿರ್ದೇಶಕ ಚಂದ್ರಶೇಖರ್‌ ಮಾತನಾಡಿ, ನಗರಗಳು ಬೆಳೆದಂತೆ ಸ್ವಚ್ಛತೆಗೆ ಹೆಚ್ಚು ಗಮನ ಕೊಡುತ್ತಿಲ್ಲ. ಇದರಿಂದ ಗಂಭೀರ ಕಾಯಿಲೆಗಳನ್ನು ಎದುರಿಸುತ್ತಿದ್ದೇವೆ. ಗಂಭೀರ ಕಾಯಿಲೆಗಳಿಂದ ಮುಕ್ತಿ ಹೊಂದಬೇಕಾದರೆ ನಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಮತ್ತು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಹೇಳಿದರು.

ಸರ್ಕಾರ ಅನೇಕ ಕಾನೂನುಗಳನ್ನು ಜಾರಿಗೊಳಿಸಿವೆ. ಆದರೆ, ಜನರು ಕಾನೂನುಗಳನ್ನು ಪಾಲಿಸುತ್ತಿಲ್ಲ ರಸ್ತೆಯಲ್ಲಿ ಕಸ ಹಾಕಬಾರದು ಎಂದರೂ ಅದನ್ನೇ ಮಾಡುತ್ತಾರೆ. ಕಸ ಎತ್ತುವುದು, ಸ್ವತ್ಛ ಮಾಡುವುದು ನಗರಸಭೆ ಕೆಲಸ. ಅದು ನಮ್ಮದಲ್ಲ ಎಂಬ ಮನೋಭಾವನೆ ಹೊಂದಿದ್ದಾರೆ. ಇಂತಹ ಮನೋಭಾವ ದೂರಾಗಬೇಕು. ನಮ್ಮ ನಗರ ಸ್ವಚ್ಛವಾಗಿರಬೇಕು ಎಂಬ ಭಾವನೆ ಬೆಳೆಸಿಕೊಂಡಾಗ ಸುಂದರ ನಗರ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

Advertisement

ಪ್ಲಾಸ್ಟಿಕ್‌ ಬಳಕೆ ನಿಷೇ ಸಿದ್ದರೂ ಗಮನ ಹರಿಸದ ಸಾರ್ವಜನಿಕರು ಹೆಚ್ಚು ಹೆಚ್ಚು ಪ್ಲಾಸ್ಟಿಕ್‌ ಅನ್ನು ಬಳಸುತ್ತಿರುವ ಕಾರಣ ಪ್ಲಾಸ್ಟಿಕ್‌ ಮಣ್ಣಿನಲ್ಲಿ ಕರಗದೇ ಮುಂದಿನ ಪೀಳಿಗೆ ಸಂಕಷ್ಟಕ್ಕೀಡಾಗುವ ಎಲ್ಲಾ ಲಕ್ಷಣಗಳಿವೆ. ಈ ಬಗ್ಗೆ ಸಾರ್ವಜನಿಕರು ಎಚ್ಚರ ವಹಿಸಬೇಕು| ಪ್ಲಾಸ್ಟಿಕ್‌ ಬಳಕೆಯನ್ನು ತೊಡೆದುಹಾಕಬೇಕು. ಘನತ್ಯಾಜ್ಯ ಸಮರ್ಪಕವಾಗಿ ನಿರ್ವಹಿಸಬೇಕು. ತಪ್ಪಿದಲ್ಲಿ ದಂಡ ವಿಧಿ ಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಗರ ಪೊಲೀಸ್‌ ಠಾಣೆ ಪಿಎಸ್‌ಐ ತೇಜಸ್ವಿ ಮಾತನಾಡಿ, ನಗರಸಭೆ ರೂಪಿಸುವ ನಿಯಮಗಳನ್ನು ಎಲ್ಲರೂ ಪಾಲನೆ ಮಾಡಬೇಕು. ಆಗಮಾತ್ರ ಸುಂದರ ನಗರ ನಿರ್ಮಾಣವಾಗಲು ಸಾಧ್ಯ. ನಗರದ ಹೃದಯ ಭಾಗದಲ್ಲಿರುವ ಬಸವನಹಳ್ಳಿ ಕೆರೆ ಮತ್ತು ಕೋಟೆ ಕರೆ ಮಲೀನ ನೀರಿನಿಂದ ಕೂಡಿದ್ದು, ಇಂತಹ ನೀರಿನ ಮೂಲಗಳನ್ನು ರಕ್ಷಿಸಿ ನಮ್ಮ ಮುಂದಿನ ಪೀಳಿಗೆಗೆ ನೀಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಕಾರ್ಯಕ್ರಮದಲ್ಲಿ ಸಂಚಾರಿ ಠಾಣೆ ಎ.ಎಸ್‌. ಐ ಲಕ್ಷ್ಮಣ್‌, ವಕೀಲ ರುದ್ರಪ್ಪ, ಆದಾಯ ತೆರಿಗೆ ಅಧಿ ಕಾರಿ ಬಸವರಾಜ್‌ ಹಾಗೂ ಬೇಕರಿ ಮಾಲಿಕರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next