Advertisement

ಪರಿಸರ ರಕ್ಷಣೆಯಿಂದ ಉತ್ತಮ ಆರೋಗ್ಯ

05:23 PM Jun 06, 2020 | Naveen |

ಚಿಕ್ಕಮಗಳೂರು: ಪರಿಸರ ಸಂರಕ್ಷಣೆಗಾಗಿ ಎಲ್ಲರ ಸಹಕಾರ ಅಗತ್ಯ. ಪರಿಸರ ಕಾಪಾಡುವುದರಿಂದ ಉತ್ತಮ ಆರೋಗ್ಯ ದೊರೆಯುತ್ತದೆ. ನೈಸರ್ಗಿಕ ಸಂಪನ್ಮೂಲಗಳ ಅವ್ಯಾಹತ ಬಳಕೆಯಿಂದ ಜೀವ ಸಂಕುಲದ ಮೇಲೆ ಉಂಟಾಗಿರುವ ದುಷ್ಪರಿಣಾಮಗಳನ್ನು ಸಮರ್ಥವಾಗಿ ಎದುರಿಸಲು ಪರಿಸರ ಸಂರಕ್ಷಣೆ ಅಗತ್ಯ ಎಂದು ಜಿಪಂ ಅಧ್ಯಕ್ಷೆ ಸುಜಾತ ಕೃಷ್ಣಪ್ಪ ತಿಳಿಸಿದರು.

Advertisement

ಶುಕ್ರವಾರ ನಗರದ ಜಿಪಂ ಆವರಣದಲ್ಲಿ ಸಾಮಾಜಿಕ ಅರಣ್ಯ ವಿಭಾಗ ಜಿಪಂ ವತಿಯಿಂದ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚಾರಣೆ ಕಾರ್ಯಕ್ರಮದಲ್ಲಿ ಸಸಿ ನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಹಿಂದಿನ ಹತ್ತಾರು ತಲೆಮಾರು ಪರಿಸರವನ್ನು ಕಾಪಾಡಿಕೊಂಡು ಬಂದಿರುವ ಕಾರಣ ಈಗ ಸಮೃದ್ಧ ಮಳೆ ಮತ್ತು ಬೆಳೆಯಾಗಿ ಜನಸಂಖ್ಯೆ ಸ್ಫೋಟದ ಈ ಕಾಲದಲ್ಲಿ ಆಹಾರ ಮತ್ತು ಕುಡಿಯುವ ನೀರಿಗೆ ಕೊರತೆ ಉಂಟಾಗಿಲ್ಲ. ಆದರೆ, ಇಂದು ಪರಿಸರವನ್ನು ಉಳಿಸದೆ ಮಳೆಯ ಅಭಾವದಿಂದ ಗ್ರಾಮದಲ್ಲಿ ಕುಡಿಯುವ ನೀರಿಗೂ ಸಹ ತೊಂದರೆಯಾಗಿದೆ. ಇಂದಿನ ಯುವಶಕ್ತಿ ಜಾಗೃತಗೊಂಡು ಪರಿಸರ ಸಂರಕ್ಷಣೆ ಮಾಡಬೇಕೆಂದು ತಿಳಿಸಿದರು.

ಜಿಪಂ ಉಪಾಧ್ಯಕ್ಷ ಜಿ.ಎನ್‌. ವಿಜಯ್‌ಕುಮಾರ್‌ ಮಾತನಾಡಿ, ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲೂ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಗಾಗಿ ವಿಶೇಷ ಆಂದೋಲನ ನೆಡೆಸಲಾಗುತ್ತದೆ ಎಂದರು. ಜಿಪಂ ಸದಸ್ಯ ಬೀಕನಹಳ್ಳಿ ಸೋಮಶೇಖರ್‌, ತಾಪಂ ಸದಸ್ಯೆ ಭವ್ಯಾ ನಟೇಶ್‌, ಜಿಪಂ ಕಾರ್ಯ ನಿರ್ವಾಹಣಾಧಿಕಾರಿ ಎಸ್‌. ಪೂವಿತ, ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎಂ. ಶರಣಬಸಪ್ಪ, ಸಹಾಯಕ ಅರಣ್ಯ ಸಂರಕ್ಷಣಾಧಿ ಕಾರಿ ಸುನಿತಾಬಾಯಿ, ವಲಯ ಅರಣ್ಯ ಅಧಿಕಾರಿ ಚರಣ್‌ ಕುಮಾರ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next