Advertisement
ನಗರದ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿವಿಧ ನರ್ಸಿಂಗ್ ಶಾಲೆಗಳು ಹಾಗೂ ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಶ್ರಾಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಶಿಕ್ಷಣ ಇಲಾಖೆಯಲ್ಲಿ ಅರಿವು ಕಾರ್ಯಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಶಿಕ್ಷಣ ನೀಡಬೇಕು. ಆದರೆ ಶಿಕ್ಷಣವಂತರೆ ಅನೇಕ ತಪ್ಪುಗಳನ್ನು ಮಾಡುತ್ತಿರುವುದು ಬೇಸರದ ಸಂಗತಿಯಾಗಿದೆ. ಆದ್ದರಿಂದ, ವಿದ್ಯಾರ್ಥಿಗಳು ಅರಿವು ಕಾರ್ಯಕ್ರಮಗಳ ಬಗ್ಗೆ ಶಿಕ್ಷಣ ಹೊಂದಿ ಜನಸಾಮಾನ್ಯರಿಗೆ ಜಾಗೃತಿ ಮೂಡಿಸಬೇಕೆಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯತ್ ಸದಸ್ಯ ರವೀಂದ್ರ ಬೆಳವಾಡಿ ಮಾತನಾಡಿ, ವಿಶ್ವ ಸಂಸ್ಥೆಯು ಜನಸಂಖ್ಯೆ ನಿಯಂತ್ರಣ ಮಾಡುವ ಉದ್ದೇಶದಿಂದ 1998ರಲ್ಲಿ ಜನಸಂಖ್ಯೆ ದಿನವನ್ನು ಘೋಷಿಸಿದ ನಂತರ ಹಲವಾರು ಸಂಘ ಸಂಸ್ಥೆಗಳು ಜನಸಂಖ್ಯೆ ನಿಯಂತ್ರಿಸುವಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿವೆ. ಆದರೆ ಅಲ್ಲಿಂದ ಇಲ್ಲಿಯವರೆಗೂ ಜನಸಂಖ್ಯೆ ಹೆಚ್ಚಾಳವಾಗುತ್ತಿದೆಯೋ ಹೊರೆತು ನಿಯಂತ್ರಣವಾಗಿತ್ತಿಲ್ಲ ಎಂದು ವಿಷಾದಿಸಿದರು.
ರಾಜಕೀಯ, ಉದ್ಯೋಗ, ಶಿಕ್ಷಣ ಹೀಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರಿಗೆ ಮೀಸಲಾತಿ ಇದೆ. ಅದೇ ರೀತಿ, ಭೂಮಿತಾಯಿಗೂ ಶೇ.33ರಷ್ಟು ಅರಣ್ಯ ಪ್ರದೇಶ ಹೊಂದಲು ಅವಕಾಶವಿದೆ. ಆದರೆ, ಮನುಷ್ಯನ ಸ್ವಾರ್ಥದಿಂದ ಇಂದು ಶೇ.13.14ರಷ್ಟು ಮಾತ್ರ ಅರಣ್ಯ ಪ್ರದೇಶವನ್ನು ಹೊಂದಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.
ತಾಲೂಕು ಪಂಚಾಯತ್ ಅಧ್ಯಕ್ಷ ಜಯಣ್ಣ ನೆಟ್ಟೆಕೆರೆಹಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಸ್‌ಟಿಜೆ ಕಾಲೇಜಿನ ಉಪನ್ಯಾಸಕ ಚಂದ್ರಶೇಖರ್ ಉಪನ್ಯಾಸ ನೀಡಿದರು. ಸಭೆಯಲ್ಲಿ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಹಿರಿಗಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಮಲ್ಲಿಕಾರ್ಜುನಪ್ಪ, ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಕೆ.ಭರತ್‌ಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ಅಶೋಕ್ ಬಾಬು, ಜಿಲ್ಲಾ ಆಯುಷ್ ಅಧಿಕಾರಿ ಡಾ.ಗೀತಾ, ಬಿಇಒ ವೆಂಕಟರಾಮು ಮತ್ತಿತರರು ಉಪಸ್ಥಿತರಿದ್ದರು.