Advertisement

ರೈತ ವಿರೋಧಿ ಕೃಷಿ ಕಾಯ್ದೆ ಹಿಂಪಡೆಯಲು ಆಗ್ರಹ

05:20 PM Jan 31, 2021 | Team Udayavani |

ಚಿತ್ರದುರ್ಗ: ಕೃಷಿ ವಿರೋ ಧಿ ಕಾಯ್ದೆ ಜಾರಿಗೆ ತಂದಿರುವ ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಚಳವಳಿ ಬೆಂಬಲಿಸಿ ರಾಜ್ಯ ರೈತ ಸಂಘ ಹಾಗೂ ಸಂಯುಕ್ತ ಕಿಸಾನ್‌ ಮೋರ್ಚಾದಿಂದ ಶನಿವಾರ ಧರಣಿ ನಡೆಸಲಾಯಿತು.

Advertisement

ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ. ನುಲೇನೂರು ಶಂಕರಪ್ಪ ಮಾತನಾಡಿ, ಕಳೆದ 63 ದಿನಗಳಿಂದಲೂ ದೆಹಲಿಯಲ್ಲಿ ಮೈ ಕೊರೆಯುವ ಚಳಿಯನ್ನು ಲೆಕ್ಕಿಸದೆ ರೈತರು ಧರಣಿ ನಡೆಸುತ್ತಿದ್ದಾರೆ. ಆದರೂ ಹಠ ಬಿಡದ ಪ್ರಧಾನಿ ರೈತ ವಿರೋಧಿ
ಕಾಯ್ದೆಗಳನ್ನು ಹಿಂಪಡೆಯಲು ಮೀನಾಮೇಷ ಎಣಿಸುತ್ತಿದ್ದಾರೆ. ಉದ್ಯಮಿ, ಬಂಡವಾಳಶಾಹಿಗಳ ಪರವಾಗಿರುವ ಕಾನೂನು ಜಾರಿಗೆ ತರಲು ಹೊರಟಿರುವ ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕು. ಅಗತ್ಯ ವಸ್ತು ಕಾಯ್ದೆ ತಿದ್ದುಪಡಿಯಿಂದ ಕೇವಲ ರೈತರಿಗಷ್ಟೇ ಅಲ್ಲ, ಜನಸಾಮಾನ್ಯರು, ಕಾರ್ಮಿಕರ ಬದುಕು ದುಸ್ತರವಾಗಲಿದೆ. ಉಳ್ಳವರು ಲಕ್ಷಾಂತರ ಟನ್‌ ಆಹಾರ ಧಾನ್ಯಗಳನ್ನು ಸಂಗ್ರಹಿಸಿಕೊಟ್ಟುಕೊಳ್ಳಲು ಈ ಕಾಯ್ದೆಯಿಂದ ಅನುಕೂಲವಾಗಿದೆ. 2012 ರಲ್ಲಿ ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದಾಗ ಇದೇ ಕಾಯ್ದೆಯನ್ನು ಜಾರಿಗೆ ತರಲು ಹೊರಟಾಗ ನರೇಂದ್ರ ಮೋದಿ ವಿರೋಧಿಸಿದ್ದರು. ಅದರಂತೆ ಈಗ ನಡೆದುಕೊಳ್ಳಲಿ ಎಂದು
ಒತ್ತಾಯಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ| ದೊಡ್ಡಮಲ್ಲಯ್ಯ, ರೈತ ಸಂಘದ ಜಿಲ್ಲಾಧ್ಯಕ್ಷ ಬಸ್ತಿಹಳ್ಳಿ ಜಿ. ಸುರೇಶ್‌ಬಾಬು, ಎಸ್‌ಯುಸಿಐನ ರವಿಕುಮಾರ್‌, ಸಿಐಟಿಯುನ ಸಿ.ಕೆ. ಗೌಸ್‌ಪೀರ್‌, ಸ್ವರಾಜ್‌ ಇಂಡಿಯಾ ಜಿಲ್ಲಾಧ್ಯಕ್ಷ ಜೆ. ಯಾದವ ರೆಡ್ಡಿ, ಕರ್ನಾಟಕ ಜನಶಕ್ತಿ ಸಂಘಟನೆಯ ಟಿ. ಶಫಿವುಲ್ಲಾ ಮತ್ತಿತರರು ಇದ್ದರು.

ಓದಿ : ಕೇಂದ್ರದಿಂದ ರೈತರ ಮೇಲೆ ದಬ್ಬಾಳಿಕೆ

Advertisement

Udayavani is now on Telegram. Click here to join our channel and stay updated with the latest news.

Next