Advertisement

ಹವಾಮಾನ ವೈಪರೀತ್ಯ: ರೈತರಿಗೆ ಆತಂಕ

06:39 PM Sep 13, 2021 | Team Udayavani |

ಚಿಕ್ಕಮಗಳೂರು: ಹವಮಾನ ವೈಪರೀತ್ಯದಿಂದ ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಸುರಿಯುತ್ತಿರುವ ಮಳೆ ರೈತರ ಮೊಗದಲ್ಲಿ ಆತಂಕ ಮೂಡಿಸಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ವರ್ಷಗಳಿಂದಭಾರೀಮಳೆಯಾಗುತ್ತಿದ್ದು ಎರಡು ವರ್ಷಗಳಿಂದ ಅತಿವೃಷ್ಟಿಗೆ ತುತ್ತಾಗಿರುವ ರೈತರು ಜಮೀನು ಮನೆ, ಬೆಳೆಯನ್ನು ಕಳೆದುಕೊಂಡು ಕಂಗಾಲಾಗಿದ್ದರು.

Advertisement

ಇತ್ತೀಚೆಗೆ ಸುರಿದ ಅಕಾಲಿಕಮಳೆಯಿಂದಕಾಫಿಬೆಳೆಗಾರರು ಭಾರೀ ನಷ್ಟ ಅನುಭವಿಸಿದ್ದರು. ಸದ್ಯ ಜಿಲ್ಲೆಯ ಮಲೆನಾಡು ಭಾಗದಲ್ಲಿ ಹವಾಮಾನ ವೈಪರೀತ್ಯದಿಂದ ಮಳೆಯಾಗುತ್ತಿದೆ. ಕಳೆದ ಬುಧವಾರದಿಂದ ಬಿಟ್ಟೂ ಬಿಟ್ಟು ಮಳೆಯಾಗುತ್ತಿದೆ. ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಭಾನುವಾರ ಬೆಳಗ್ಗೆಯಿಂದ ಸಂಜೆಯವರೆಗೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಚಿಕ್ಕಮಗಳೂರು ತಾಲೂಕು ಸೇರಿದಂತೆ ಕಡೂರು, ತರೀಕೆರೆ ಭಾಗದಲ್ಲಿ ಮೋಡ ಕವಿದವಾತಾವರಣನಿರ್ಮಾಣವಾಗಿದ್ದು ಆಗಾಗ್ಗೆ ಸಾಧಾರಣ ಮಳೆಯಾಗಿದೆ.

ಮೂಡಿಗೆರೆ, ಕೊಪ್ಪ, ಶೃಂಗೇರಿ ಹಾಗೂ ನರಸಿಂಹರಾಜಪುರ ತಾಲೂಕು ವ್ಯಾಪ್ತಿಯಲ್ಲಿಮಳೆಯಾಗುತ್ತಿದೆ.ತುಂಗಾ, ಭದ್ರಾ, ಹೇಮಾವತಿ ನದಿ ನೀರಿ ಹರಿವು ಸ್ವಲ್ಪಮಟ್ಟಿಗೆ ಏರಿಕೆಯಾಗಿದೆ. ನಿರಂತರ ಮಳೆಮಲೆನಾಡಿನರೈತರಲ್ಲಿಆತಂಕವನ್ನು ಮೂಡಿಸಿದೆ. ಜೂನ್‌, ಜುಲೈ ತಿಂಗಳಲ್ಲಿ ಸುರಿದ ಮಳೆ ಮಲೆನಾಡಿನ ಕೃಷಿಕರಲ್ಲಿ ಅತಿವೃಷ್ಟಿಯ ಆಂತಕ ಸೃಷ್ಟಿಸಿತ್ತು. ಆದರೆ ಆಗಸ್ಟ್‌ನಲ್ಲಿಮಳೆ ತಗ್ಗಿದ್ದರಿಂದ ನಿಟ್ಟುಸಿರು ಬಿಟ್ಟಿದ್ದರು. ಮಳೆ ಕ್ಷೀಣಿಸುತ್ತಿದ್ದಂತೆ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದರು.

ಭತ್ತದ ಗದ್ದೆಗಳು ಸೇರಿದಂತೆ ಕಾಫಿ, ಅಡಕೆ ತೋಟಗಳಲ್ಲಿ ಕೃಷಿ ಚಟುವಟಿಕೆ ಬಿರುಸಿನಿಂದ ಸಾಗಿತ್ತು. ಸದ್ಯ ಭತ್ತದ ನಾಟಿ ಕೆಲಸ ಪೂರ್ಣಗೊಂಡು ಗದ್ದೆಗಳು ಹಚ್ಚಹಸಿರಿನಿಂದಕಂಗೊಳಿಸುತ್ತಿವೆ.ಕಾಫಿ, ಅಡಕೆ ತೋಟಗಳಲ್ಲಿ ಕಳೆ, ಚಿಗುರು ತೆಗೆಯುವ ಕೆಲಸ ಪೂರ್ಣಗೊಂಡು ಗೊಬ್ಬರ, ಔಷಧ ಸಿಂಪಡಣೆ ಕಾರ್ಯ ನಡೆಯುತ್ತಿದೆ. ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ಔಷಧ ಸಿಂಪಡಣೆ ಮತ್ತು ಗೊಬ್ಬರ ಹಾಕಲು ಅಡ್ಡಿಯಾಗಿದೆ. ಮಳೆಯಿಂದ ಕಾಫಿ, ಕಾಳುಮೆಣಸು, ಅಡಕೆ ಬೆಳೆಗಾರರಲ್ಲೂ ಆತಂಕಕ್ಕೆಕಾರಣವಾಗಿದೆ.

ಸತತಅತಿವೃಷ್ಟಿ, ಅಕಾಲಿಕ ಮಳೆ ಪರಿಣಾಮ ಕಳೆದ ಕೆಲ ವರ್ಷಗಳಿಂದಬೆಳೆನಷ್ಟಅನುಭವಿಸಿರುವ ಬೆಳೆಗಾರರು ಈ ಬಾರಿಯೂ ಬೆಳೆ ನಷ್ಟದ ಭೀತಿಯಲ್ಲಿದ್ದಾರೆ. ಈಗಾಗಲೇ ಅಡಕೆ, ಕಾಫಿ, ಕಾಳುಮೆಣಸು ತೋಟಗಳಲ್ಲಿ ಉತ್ತಮ ಫಸಲು ಬಂದಿದ್ದು, ಸತತ ಮಳೆಯಿಂದಾಗಿ ಬೆಳೆಗಳಿಗೆ ಕೊಳೆ ರೋಗ ನಿಧಾನವಾಗಿ ಆವರಿಸುತ್ತಿದೆ. ಬೆಳೆ ಉಳಿಸಿಕೊಳ್ಳಲು ಪಡಿಪಾಟಲು ಅನುಭವಿಸುತ್ತಿದ್ದಾರೆ.

Advertisement

ಕೊಳೆ ರೋಗಕ್ಕೆ ಔಷಧ ಸಿಂಪಡಣೆಗೆ ಮಳೆ ಅಡ್ಡಿಯಾಗುತ್ತಿದೆ. ಭೂಮಿಯಲ್ಲಿ ತೇವಾಂಶದ ಹೆಚ್ಚಳದಿಂದಾಗಿ ಕಾಫಿ, ಅಡಕೆ, ಕಾಳುಮೆಣಸು ಬೆಳೆಗಳು ಉದುರಲು ಆರಂಭಿಸಿರುವುದು ಬೆಳೆಗಾರರ ಆತಂಕಕ್ಕೆ ಕಾರಣವಾಗಿದೆ. ಒಟ್ಟಾರೆ ಕಳೆದ ಕೆಲ ವರ್ಷಗಳಿಂದ ಅತಿವೃಷ್ಟಿಯಿಂದಾಗಿ ಬೆಳೆನಷ್ಟ ಅನುಭವಿಸಿರುವ ರೈತರು ಈ ಬಾರಿಯಾದರೂ ಬೆಳೆದ ಬೆಳೆ ಕೈಹಿಡಿಯಲಿದೆಯೇ ಎಂಬ ಆಶಾಭಾವನೆಯಲ್ಲಿದ್ದಾರೆ. ಈ ಮಧ್ಯೆ ಹವಾಮಾನ ವೈಪರೀತ್ಯದಿಂದಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಕೃಷಿಕರು ಬೇಸತ್ತು ಹೋಗುವಂತಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next