Advertisement

ತಾಲೂಕು ಕಚೇರಿ ಆವರಣದಲ್ಲಿ ಅವ್ಯವಸ್ಥೆ

07:01 PM Nov 21, 2019 | Naveen |

ಚಿಕ್ಕನಾಯಕನಹಳ್ಳಿ: ತಾಲೂಕು ಕಚೇರಿ ಸುತ್ತಮುತ್ತ ಸ್ವಚ್ಛತೆ ಮರೀಚಿಕೆಯಾಗಿ ಸೊಳ್ಳೆ ಕಾಟ, ಗಬ್ಬು ವಾಸನೆ ಹೆಚ್ಚಾಗಿ ರೈತರಿಗೆ ತೊಂದರೆಯಾಗುತ್ತಿದೆ. ಇತ್ತೀಚೆಗೆ ಸುರಿದ ಮಳೆಯಿಂದ ಆವರಣದಲ್ಲಿನ ಗುಂಡಿಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗುತ್ತಿದೆ.

Advertisement

ಆವರಣದಲ್ಲಿ ಸಾರ್ವಜನಿಕ ಶೌಚ ಗೃಹ ವಿದ್ದರೂ ನಿರ್ವಹಣೆ ಇಲ್ಲದೆ ಗಬ್ಬು ನಾರುತ್ತಿದೆ. ಕಚೇರಿ ಕೆಲಸಕ್ಕೆ ಬಂದವರು ಆವರಣದಲ್ಲಿಯೇ ಮೂತ್ರ ವಿಸರ್ಜಿಸುವುದರಿಂದ ಅನೈರ್ಮಲ್ಯಕ್ಕೆ ಕಾರಣವಾಗಿದೆ. ಸಾಂಕ್ರಾಮಿಕ ರೋಗ ಭೀತಿ: ತಾಲೂಕು ಕಚೇರಿಗೆ ದಿನನಿತ್ಯ ಸಾವಿರಾರು ಜನ ಬಂದು ಹೋಗುತ್ತಿದ್ದು, ಆವರಣ ಸ್ವಚ್ಛತೆ ಇಲ್ಲದಿರುವುದರಿಂದ ಸೊಳ್ಳೆ ಕಚ್ಚಿಸಿಕೊಳ್ಳಬೇಕು. ಇದರಿಂದ ಸಾಂಕ್ರಾಮಿಕ ರೋಗ ಭೀತಿಯೂ ಎದುರಾಗಿದೆ.

ಪಟ್ಟಣದಲ್ಲಿ ಡೆಂಘೀ ಪ್ರಕರಣಗಳು ದಾಖಲಾಗಿದ್ದು,ಅಧಿಕಾರಿಗಳು ಇತ್ತ ಗಮನ ಹರಿಸಬೇಕಿದೆ. ಕೆಲ ತಿಂಗಳ ಹಿಂದೆ ಉಪನೋಂದಾಹಣೆ ಕಚೇರಿ ತಾಲೂಕು ಕಚೇರಿ ಕಟ್ಟಡಕ್ಕೆ ವರ್ಗಾವಣೆಯಾಗಿದ್ದು, ದಿನನಿತ್ಯ ಹಲವಾರು ಜನ ಜಮೀನು ನೋಂದಣಿಗೆ ಬರುತ್ತಾರೆ. ಆದರೆ ಆವರಣದಲ್ಲಿ ಕುಳಿತುಕೊಳ್ಳಲು ಕುರ್ಚಿಗಳ ವ್ಯವಸ್ಥೆ , ಕುಡಿಯಲು ನೀರಿನ ವ್ಯವಸ್ಥೆಯೂ ಇಲ್ಲ. ಅಕ್ಕ ಪಕ್ಕದ ಆಂಗಡಿಗಳ ಬಳಿ ಹೋಗಿ ನೀರು ಕುಡಿಯುವಂತಾಗಿದೆ. ಕಚೇರಿ ಆವರಣದಲ್ಲಿ ಸಿಕ್ಕ ಸಿಕ್ಕಲ್ಲಿ ವಾಹನ ನಿಲ್ಲಿಸುತ್ತಿದ್ದು, ಪಾರ್ಕಿಂಗ್‌ ವ್ಯವಸ್ಥೆ ಸರಿಯಾಗಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಗಮನಿಸಿ ಕ್ರಮಕೈಗೊಳ್ಳಬೇಕು ಎಂದು ಜನರು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next