Advertisement

ಪ್ರಾಥಮಿಕ ಆರೋಗ್ಯ ಕೇಂದ್ರ ತಾಲೂಕು ಆಸ್ಪತ್ರೆಯಾಗಿಸಿ

11:02 PM Jun 07, 2021 | Team Udayavani |

ತರೀಕೆರೆ: ಪ್ರಸ್ತುತ ಸ್ಥಿತಿಯಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿದ್ದರೂ ಸಹ ಮುಂದಿನ ದಿನಗಳಲ್ಲಿ ಪುನಃ ಸೋಂಕು ತೀವ್ರಗೊಳ್ಳಬಹುದು ಎಂದು ತಜ್ಞರು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯನ್ನು ಸುಸಜ್ಜಿತಗೊಳಿಸಬೇಕಾಗಿದೆ ಮತ್ತು ಅಜ್ಜಂಪುರ ತಾಲೂಕು ಕೇಂದ್ರವಾಗಿದೆ.

Advertisement

ಅಲ್ಲಿ ಕೇವಲ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು ಆಸ್ಪತ್ರೆಯನ್ನು ತಾಲೂಕು ಆಸ್ಪತ್ರೆಯನ್ನಾಗಿ ಮಾರ್ಪಡಿಸಬೇಕು ಎಂದು ಮಾಜಿ ಶಾಸಕ ಜಿ.ಎಚ್‌. ಶ್ರೀನಿವಾಸ್‌ ಸರಕಾರವನ್ನು ಒತ್ತಾಯಿಸಿದ್ದಾರೆ. ಸಾರ್ವಜನಿಕ ಆಸ್ಪತ್ರೆ 100 ಹಾಸಿಗೆ ಸಾಮರ್ಥವನ್ನು ಹೊಂದಿದೆ.

ಈಗಾಗಲೇ ಕೋವಿಡ್‌ ಸೋಂಕಿತರಿಗೆ ಇಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 7 ವೆಂಟಿಲೇಟರ್‌ಗಳು ಆಸ್ಪತ್ರೆಯಲ್ಲಿ ಇದ್ದರೂ ಸಹ ಇವುಗಳೊಂದಿಗೆ ತಜ್ಞ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಕೊರತೆ ಇದೆ ಮತ್ತು ಪ್ರಾಣವಾಯು ಕೂಡ ಲಭ್ಯವಿಲ್ಲ. ಕೂಡಲೇ ಆಸ್ಪತ್ರೆಯಲ್ಲಿ ಆಕ್ಸಿಜನ್‌ ತಯಾರಿಸುವ ಘಟಕವನ್ನು ಸ್ಥಾಪಿಸಬೇಕು.

ಜಿಲ್ಲೆಗೆ ಪಕ್ಕದ ಭದ್ರಾವತಿಯಿಂದ ಆಮ್ಲಜನಕ ತರಲಾಗುತ್ತಿತ್ತು. ರೋಗಿಗಳ ಸಂಖ್ಯೆ ಹೆಚ್ಚಾದಲ್ಲಿ ಆಮ್ಲಜನಕದ ಕೊರತೆ ಉಂಟಾಗುವ ಮುನ್ನ ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂದಿದ್ದಾರೆ. ಆಮ್ಲಜನಕ ಘಟಕ ಸ್ಥಾಪನೆಗೆ ಶಾಸಕರ, ಸಂಸದರ ಪ್ರದೇಶಾಭಿವೃದ್ಧಿ ನಿಧಿ ಮತ್ತು ಉಳಿದ ಮೊತ್ತವನ್ನು ಸರಕಾರದಿಂದ ಪಡೆದು ಘಟಕವನ್ನು ಸ್ಥಾಪಿಸಬೇಕು.

ಅಜ್ಜಂಪುರ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಮಾರ್ಪಡಿಸುವದರಿಂದ ಹೊಸ ತಾಲೂಕಿನ ವ್ಯಾಪ್ತಿಯಲ್ಲಿರುವ ಗಡಿ ಭಾಗದ ಗ್ರಾಮಗಳಿಗೆ ಅನುಕೂಲವಾಗುತ್ತದೆ. ಕೋವಿಡ್‌ ಸೋಂಕು ತಡೆಗಟ್ಟಲು ಸಹಕಾರವಾಗುತ್ತದೆ. ಸರಕಾರ ಕೂಡಲೇ ಇದರ ಕಡೆ ಗಮನ ಹರಿಸಬೇಕು ಎಂದಿದ್ದಾರೆ.

Advertisement

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಾಸಿಗೆಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಈಗಿರುವ ಸಾಮರ್ಥಯಕ್ಕಿಂತ ಹೆಚ್ಚು ಸಾಮರ್ಥಯದ ಹಾಸಿಗೆಗಳ ಆಸ್ಪತ್ರೆಯನ್ನು ಈಗಲೇ ಸಿದ್ಧಪಡಿಸಿಟ್ಟುಕೊಂಡಲ್ಲಿ ಮುಂದಿನ ದಿನಗಳಲ್ಲಿ ಸೋಂಕಿತರ ಶುಶೂಷೆಗೆ ಅನುಕೂಲವಾಗುತ್ತದೆ. ಗ್ರಾಮಾಂತರ ಪ್ರದೇಶಗಳಲ್ಲಿ ಇನ್ನೂ ಕೂಡ ಸೋಂಕು ಹರಡುತ್ತಲೇ ಇದೆ. ಸೋಂಕನ್ನು ಹತೋಟಿಗೆ ತರುವ ಕೆಲಸಗಳಾಗಬೇಕು ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next