Advertisement
ಮತ್ತೆ ಎರಡನೇ ಅಲೆ ಆರಂಭದ ಬಳಿಕ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 500ರ ಗಡಿ ದಾಟುತ್ತಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳಗೊಳ್ಳುತ್ತಿರುವುದಕ್ಕೆ ಬೆದರಿರುವ ಜನತೆ ಪ್ರವಾಸಿಗರಿಗೆ, ಧಾರ್ಮಿಕ ಸ್ಥಳಗಳಿಗೆ ಆಗಮಿಸುವರಿಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿದ್ದಾರೆ. ಕೊರೊನಾ ಸೋಂಕು ಹರಡುತ್ತಿರುವುದರ ನಡುವೆಯೂ ವಾರಾಂತ್ಯದಲ್ಲಿ ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಪ್ರವಾಸಿಗರ ದಂಡು ಹರಿದು ಬರುತ್ತಿದ್ದು, ಮಾಸ್ಕ್ಧರಿಸದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಬೇಕಾಬಿಟ್ಟಿ ತಿರುಗಾಡುತ್ತಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಜಿಲ್ಲೆಯ ಗಿರಿ ಪ್ರದೇಶಕ್ಕೆ ಆಗಮಿಸುವ ಪ್ರವಾಸಿಗರನ್ನು ತಾಲೂಕಿನ ಕೈಮರ ಚೆಕ್‌ಪೋಸ್ಟ್‌ನಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿಗಳನ್ನು ನಿಯೋಜಿಸಿ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಕೋವಿಡ್ ಜಾಗೃತಿ ನೀಡಲಾಗುತ್ತಿದೆ.
Advertisement
ಕೋವಿಡ್ ನಿಯಂತ್ರಣಕ್ಕೆ ಸಕಲ ಸಿದ್ಧತೆ
06:55 PM Apr 19, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.