Advertisement
ನಗರದ ರಾಮಕೃಷ್ಣ ನರ್ಸಿಂಗ್ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತಾಯಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಚಿತ್ತವಿಕಲತೆ ದಿನಾಚರಣೆ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ನಿಮ್ಮ ವೃತ್ತಿಗೆ ಸಂಬಂಧಿಸಿದಂತಹ ಕಾನೂನುಗಳನ್ನು ಮೊದಲು ತಿಳಿದುಕೊಳ್ಳಿ. ಅದು ತಮ್ಮ ಮುಂದಿನ ವೃತ್ತಿ ಜೀವನದಲ್ಲಿ ಸಹಕಾರಿಯಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ್ ಚೇಂಗಟಿ ಮಾತನಾಡಿ, ವಿಶ್ವ ಮಾನಸಿಕ ಚಿತ್ತ ದಿನಾಚರಣೆಯನ್ನು 1986 ರಿಂದಲೇ ಆಚರಣೆ ಮಾಡುತ್ತಿದ್ದೇವೆ. ಆದರೂ ಸಹ ಮಾನಸಿಕ ಚಿತ್ತ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದೇಶದಲ್ಲಿ ಸುಮಾರು ಎರಡೂವರೆ ಕೋಟಿಗಿಂತಲೂ ಅಧಿಕ ಜನರು ಈ ರೋಗದಿಂದ ಬಳಲುತ್ತಿರುವುದು ವಿಷಾದನೀಯ. ಇಂತಹ ಕಾಯಿಲೆಗೆ ಒಳಪಟ್ಟವರನ್ನು ಗುರುತಿಸಿ ಚಿಕಿತ್ಸೆ ಕೊಡಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ ಎಂದರು.
ದೈಹಿಕ, ಮಾನಸಿಕ, ಆಧ್ಯಾತ್ಮಿಕ ಮತ್ತು ಸಾಮಾಜಿಕವಾಗಿ ಪ್ರತಿಯೊಬ್ಬರು ಆರೋಗ್ಯವಾಗಿರಬೇಕು. ಹಾಗಾದರೆ ಮಾತ್ರ ಪ್ರತಿಯೊಂದು ಕಾನೂನು ತಿಳಿಯುವ ಮೂಲಕ ಸದೃಢ ರಾಷ್ಟ್ರ ಕಟ್ಟಬಹುದು ಎಂದ ಅವರು, ಮನುಷ್ಯರು ಆಸೆ-ದುರಾಸೆ ಬಿಟ್ಟು ಸಮಾಜದ ಒಳಿತಿಗೆ ದೊಡ್ಡ ಕನಸನ್ನು ಹೊಂದಿ ತಮ್ಮ ಗುರಿಯನ್ನು ಸಾಧಿಸಬೇಕು ಎಂದು ಸಲಹೆ ನೀಡಿದರು.
ಪ್ರತಿಯೊಬ್ಬರೂ ನೈತಿಕ ಗುಣಗಳನ್ನು ಬೆಳೆಸಿಕೊಂಡು ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವ ಮೂಲಕ ಆರೋಗ್ಯ ಮತ್ತು ಅದರ ನಿವಾರಣೆ ಕುರಿತು ಕಾನೂನು ತಿಳಿಯುವುದು ಅತ್ಯವಶ್ಯಕ ಎಂದರು.
ರಾಮಕೃಷ್ಣ ನರ್ಸಿಂಗ್ ಕಾಲೇಜಿನ ಆಡಳಿತಾಧಿಕಾರಿ ಉಮಾಮಹೇಶ್ವರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಾನಸಿಕ ಸ್ಥಿರ ಆರೋಗ್ಯ ಹಾಗೂ ಮಾನಸಿಕ ವ್ಯಕ್ತಿಗಳ ಹಕ್ಕುಗಳ ಕುರಿತಾಗಿ ಹಲವು ವಿಷಯಗಳನ್ನು ಕಾನೂನಿನ ಚೌಕಟ್ಟಿನಲ್ಲಿ ವಿದ್ಯಾರ್ಥಿಗಳು ತಿಳಿದುಕೊಂಡಾಗ ಮಾತ್ರ ಭವಿಷ್ಯದ ದಿನಗಳಲ್ಲಿ ಬಹಳ ಉಪಯುಕ್ತವಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾನಸಿಕ ಚಿತ್ತ ಕುರಿತ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಜಿಲ್ಲಾ ಆಸ್ಪತ್ರೆಯ ಮನೋಶಾಸ್ತ್ರಜ್ಞ ಡಾ| ವಿನಯ್ ಕುಮಾರ್ ಮನೋವ್ಯಾಧಿಯ ಕಾರಣಗಳು ಮತ್ತು ಚಿಕಿತ್ಸೆಗಳ ಕುರಿತು ಹಾಗೂ ನ್ಯಾಯಾವಾಧಿ ಕೆ.ಎನ್.ಚಂದ್ರಶೇಖರ್ ಮಾನಸಿಕ ಆರೋಗ್ಯ ಕಾಯ್ದೆಯ ಕುರಿತು ಉಪನ್ಯಾಸ ನೀಡಿದರು.
ಸಾಮಾಜಿಕ ಭದ್ರತಾ ನಿರೀಕ್ಷಕಿ ಶಶಿಕಲಾ, ಕಾಲೇಜಿನ ಪ್ರಾಚಾರ್ಯೆ ಪ್ರೀತಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಯಾವುದೇ ವ್ಯಕ್ತಿ ಕಾನೂನನ್ನು ಉಲ್ಲಂಘಿಸಿ ಆ ಕಾನೂನಿನ ಬಗ್ಗೆ ನನಗೆ ತಿಳಿದಿಲ್ಲ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರೆ ನ್ಯಾಯಾಲಯ ಕ್ಷಮಿಸುವುದಿಲ್ಲ. ಆದ್ದರಿಂದ ಎಲ್ಲಾ ನಾಗರಿಕರು ಕಾನೂನು ತಿಳಿದುಕೊಂಡು ನಡೆಯುವುದು ಒಳಿತು.•ಎ.ಎಸ್.ಸದಲಗೆ, ನ್ಯಾಯಾಧೀಶರು.