Advertisement

Chikkodi: ವ್ಯಕ್ತಿಯ ಭೀಕರ ಕೊಲೆ; ಬೆಚ್ಚಿ ಬಿದ್ದ ಜನತೆ

03:02 PM Jun 17, 2024 | Team Udayavani |

ಚಿಕ್ಕೋಡಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೋರ್ವನನ್ನು ಕೊಲೆ ಮಾಡಿರುವ ಘಟನೆ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಜೂ. 17ರ ಸೋಮವಾರ ನಡೆದಿದೆ.

Advertisement

ಯಕ್ಸಂಬಾ ಪಟ್ಟಣದ ನಿವಾಸಿ ಮಹಾಂತೇಶ ಕುರಣಿ (48) ಕೊಲೆಯಾದ ವ್ಯಕ್ತಿ.

ಸೋಮವಾರ ಮುಂಜಾನೆ 3 ಗಂಟೆ ಸುಮಾರಿಗೆ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದ್ದು, ಪಟ್ಟಣದ ಬಿರೇಶ್ವರ ಕಾಲನಿ ಬಳಿ‌ ಈ ಘಟನೆ ನಡೆದಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಸದಲಗಾ ಪೊಲೀಸರು ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ.

ಕಳೆದ 4 ದಿನಗಳಿಂದ ಯಕ್ಸಂಬಾ ಪಟ್ಟಣದಲ್ಲಿ ಶ್ರೀ ಲಕ್ಷ್ಮೀದೇವಿ ಜಾತ್ರೆ ಅದ್ದೂರಿಯಾಗಿ ನಡೆದಿತ್ತು. ರವಿವಾರ ರಾತ್ರಿ ಸರಿಗಮಪ ಹೆಸರುವಾಸಿ ಹಣಮಂತ ಲಮಾಣಿ ತಂಡದವರಿಂದ ಹಾಸ್ಯ ಸಂಜೆ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮದಲ್ಲಿ ಪಟ್ಟಣ ಸೇರಿ ಸುತ್ತಮುತ್ತಲಿನ ಹಳ್ಳಿಯ ಜನರು ಪಾಲ್ಗೊಂಡಿದ್ದರು. ಬೆಳಿಗ್ಗೆ ಕೊಲೆಯಾದ ವಿಷಯ ಜನರನ್ನು ಬೆಚ್ಚಿ ಬೀಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next