ಚಿಕ್ಕೋಡಿ: ಕೃಷ್ಣಾ ನದಿ ಉಗಮಸ್ಥಾನ ಮಹಾಬಳೇಶ್ವರ, ಕೊಯ್ನಾ, ನವಜಾ ಮತ್ತು ಕಾಳಮ್ಮವಾಡಿ ಜಲಾನಯನ ಪ್ರದೇಶದಲ್ಲಿ ಹಾಗೂ ರಾಜ್ಯದ ಗಡಿ ಭಾಗದ ನಿಪ್ಪಾಣಿ, ಚಿಕ್ಕೋಡಿ, ರಾಯಬಾಗ ಮತ್ತು ಹುಕ್ಕೇರಿ ಭಾಗದಲ್ಲಿಯೂ ನಿರಂತರವಾಗಿ ಮಳೆ ಆಗುತ್ತಿದೆ. ಹೀಗಾಗಿ ಕೃಷ್ಣಾ ಮತ್ತು ಉಪನದಿಗಳಿಗೆ 1.05 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ದೂಧಗಂಗಾ ಮತ್ತು ವೇದಗಂಗಾ ನದಿಗಳು ಒಡಲು ದಾಟಿ ಹರಿದು ಪಕ್ಕದ ಬೆಳೆಗಳಿಗೆ ನುಗ್ಗಿವೆ.
Advertisement
ಮಹಾರಾಷ್ಟ್ರದ ಕೊಂಕಣ ಭಾಗದ ಮಹಾಬಳೇಶ್ವರ, ಕೊಯ್ನಾ, ನವಜಾ ಹಾಗೂ ಕಾಳಮ್ಮವಾಡಿ ಭಾಗದಲ್ಲಿ ಎರಡು ದಿನಗಳಿಂದ 150 ಮಿಮೀ ಗೂ ಅಧಿಕ ಮಳೆ ಸುರಿಯುತ್ತಿದೆ. ಇದರಿಂದ ಕೃಷ್ಣಾ ನದಿಗೆ ಒಂದೇ ರಾತ್ರಿಯಲ್ಲಿ 21 ಸಾವಿರ ಕ್ಯೂಸೆಕ್ ಮತ್ತು ದೂಧಗಂಗಾ ಮತ್ತು ವೇದಗಂಗಾ ನದಿಗೆ 5 ಸಾವಿರ ಕ್ಯೂಸೆಕ್ ನೀರು ಹೆಚ್ಚಳವಾಗಿದೆ.
ಜಲದಿಗ್ಬಂಧನವಾಗಿದೆ. ನೀರಿನಲ್ಲಿ ಮುಳುಗಡೆಯಾಗಿರುವ ಎಲ್ಲ ದೇವಸ್ಥಾನಗಳಿಗೆ ಭಕ್ತರ ದರ್ಶನ ನಿರ್ಬಂಧಿಸಲಾಗಿದ್ದು, ಎಲ್ಲ ಕಡೆ ಪೊಲೀಸ್
ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಬಿಗಿ ಬಂದೋಬಸ್ತ್ ಕಲ್ಪಿಸಿದ್ದಾರೆ.
Related Articles
Advertisement
ದೂಧಗಂಗಾ ನದಿಯ ಚಿಕ್ಕೋಡಿ ತಾಲೂಕಿನ ಮಲಿಕವಾಡ-ದತ್ತವಾಡ, ನಿಪ್ಪಾಣಿ ತಾಲೂಕಿನ ಕಾರದಗಾ-ಭೋಜ, ಭೋಜವಾಡಿ-ಕುನ್ನೂರ, ಬಾರವಾಡ-ಕುನ್ನೂರ,ಜತ್ರಾಟ-ಭೀವಸಿ, ಕೃಷ್ಣಾ ನದಿಯ ಮಾಂಜರಿ-ಬಾವನ ಸವದತ್ತಿ ಸೇತುವೆಗಳು ಮುಳುಗಿವೆ. ಎಲ್ಲ ಸೇತುವೆಗಳ ಮೇಲೆ ಅಪಾರ ಪ್ರಮಾಣದ ನೀರು ಹರಿಯುತ್ತಿದೆ. ಸೇತುವೆ ಹತ್ತಿರ ಜಿಲ್ಲಾಡಳಿತ ಬಿಗಿ ಭದ್ರತೆ ಒದಗಿಸಿದೆ.
ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್‌ದಿಂದ ಕೃಷ್ಣಾ ನದಿಗೆ 81 ಸಾವಿರ ಕ್ಯೂಸೆಕ್ ನೀರು ಹರಿದು ಬಂದರೆ, ದೂಧಗಂಗಾ ಮತ್ತು ವೇದಗಂಗಾ ನದಿಗೆ 24 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ ಕೃಷ್ಣಾ ನದಿಗೆ 1.05 ಲಕ್ಷ ಕ್ಯೂಸೆಕ್ ನೀರು ಹರಿದು ಹಿಪ್ಪರಗಿ ಬ್ಯಾರೇಜ್‌ಗೆ ಹೋಗುತ್ತಿದೆ. ಹಿಪ್ಪರಗಿ ಬ್ಯಾರೇಜ್ ದಿಂದ 87 ಸಾವಿರ ಕ್ಯೂಸೆಕ್ ನೀರು ಆಲಮಟ್ಟಿ ಜಲಾಶಯಕ್ಕೆ ಹೋಗುತ್ತಿದೆ ಎಂದು ಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ ತಿಳಿಸಿದ್ದಾರೆ.
ಮಳೆ ವಿವರಮಹಾರಾಷ್ಟ್ರದ ಜಲಾನಯನ ಪ್ರದೇಶವಾದ ಕೊಯ್ನಾ-107 ಮಿಮೀ, ವಾರಣಾ-75ಮಿಮೀ, ಕಾಳಮ್ಮವಾಡಿ-64 ಮಿಮೀ, ಮಹಾಬಳೇಶ್ವರ-158 ಮಿಮೀ, ನವಜಾ-127ಮಿಮೀ, ರಾಧಾನಗರಿ-97 ಮಿಮೀ, ಸಾಂಗಲಿ-09 ಮಿಮೀ, ಕೊಲ್ಲಾಪೂರ-29 ಮಿಮೀ ಮಳೆ ಆಗಿದೆ. ಚಿಕ್ಕೋಡಿ-14.2 ಮಿಮೀ, ಅಂಕಲಿ-9.2 ಮಿಮೀ, ನಾಗರಮುನ್ನೊಳ್ಳಿ-10.4 ಮಿಮೀ, ಸದಲಗಾ-11.8 ಮಳೆಯಾಗಿದೆ.