Advertisement

Chikkodi ಮುಖಂಡರ ಅಭಿಪ್ರಾಯ ಪಡೆದು ಅಭ್ಯರ್ಥಿ ಫೈನಲ್‌: ಸಚಿವ ಸತೀಶ ಜಾರಕಿಹೊಳಿ 

07:54 PM Mar 17, 2024 | Team Udayavani |

ಚಿಕ್ಕೋಡಿ: 2-3 ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಯಾರನ್ನು ಅಭ್ಯರ್ಥಿ ಮಾಡಬೇಕೆಂಬುದು ಲೋಕಸಭೆ ಕ್ಷೇತ್ರದ ಹಾಲಿ, ಮಾಜಿ ಶಾಸಕರು ಮತ್ತು ಮುಖಂಡರ ಅಭಿಪ್ರಾಯ ಪಡೆದುಕೊಂಡು ಅಂತಿಮ ಅಭಿಪ್ರಾಯ ಪಕ್ಷದ ವರಿಷ್ಠರಿಗೆ ತಿಳಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

Advertisement

ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ನಿಪ್ಪಾಣಿ, ಚಿಕ್ಕೋಡಿ ಮತ್ತು ರಾಯಬಾಗ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.ಎರಡು ದಿನ ಲೋಕಸಭೆ ಕ್ಷೇತ್ರದಲ್ಲಿ ಪ್ರವಾಸ ಮಾಡಿ ಯಾರನ್ನು ಅಭ್ಯರ್ಥಿ ಮಾಡಿದರೆ ಪಕ್ಷಕ್ಕೆ ಅನುಕೂಲವಾಗುತ್ತದೆಂದು ಅಭಿಪ್ರಾಯ ಪಡೆಯಲಾಗುತ್ತದೆ. ಎಲ್ಲರ ಅಭಿಪ್ರಾಯದ ಮೇರೆಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುತ್ತದೆ ಎಂದರು.

ಚುನಾವಣೆ ದಿನಾಂಕ ಘೋಷಣೆಯಾಗಿದೆ. ಅಭ್ಯರ್ಥಿಗಳ ಆಯ್ಕೆ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಮತ್ತು ಶಾಸಕರಾದ ರಾಜು ಕಾಗೆ ಸೇರಿದಂತೆ ಹಾಲಿ ಮತ್ತು ಮಾಜಿ ಶಾಸಕರನ್ನು ಭೇಟಿ ಮಾಡಿ ಅಭಿಪ್ರಾಯ ಪಡೆಯಲಾಗುತ್ತದೆ.

ಚಿಕ್ಕೋಡಿಯಿಂದ ಯಾರನ್ನು ಅಭ್ಯರ್ಥಿಯನ್ನಾಗಿ ಮಾಡಬೇಕೆಂದು ಕೊನೆ ಸುತ್ತಿನ ಮಾತುಕತೆ ನಡೆಸುವ ಕುರಿತು ಪ್ರವಾಸ ಮಾಡುತ್ತಿದ್ದೇನೆ ಎಂದರು.

ಬಿಜೆಪಿ ಟಿಕೆಟ್ ವಂಚಿತ ರಮೇಶ ಕತ್ತಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಈ ಕುರಿತು ನಮ್ಮ ಜೊತೆ ಯಾವುದೇ ಮಾತುಕತೆ ನಡೆದಿಲ್ಲ, ಪಕ್ಷದ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತಿಸಲಾಗುತ್ತದೆ ಎಂದರು.

Advertisement

ಸತೀಶ ಜಾರಕಿಹೊಳಿ ಮಗಳ ಕಡೆ ಒಲುವು ಇದೆಯಾ ಅಥವಾ ಬೇರೆ ಅಭ್ಯರ್ಥಿ ಫೈನಲ್ ಮಾಡುವುದರ ಕಡೆ ಒಲುವು ಇದೆಯಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ನಮ್ಮದು ಗೆಲುವಿನ ಕಡೆ ಒಲುವಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬೂಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ, ವೀರಕುಮಾರ ಪಾಟೀಲ, ಎಸ್.ಬಿ.ಘಾಟಗೆ, ಮುಖಂಡರಾದ ಮಹಾವೀರ ಮೋಹಿತೆ, ಎಚ್.ಎಸ್.ನಸಲಾಪೂರೆ, ಡಾ,ಎನ್.ಎ.ಮಗದುಮ್ಮ, ರಾಜು ಕೊಟಗಿ, ರಾಜು ಪಾಟೀಲ, ಸಂಜು ಬಾನೆ, ನಿರ್ಮಲಾ ಪಾಟೀಲ, ಅಪ್ಪಾಸಾಹೇಬ ಕುಲಗೂಡೆ ಮುಂತಾದವರು ಇದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next