ಚಿಕ್ಕೋಡಿ : ಇಲ್ಲಿನ ಆರ್‌ಡಿ ಕಾಲೇಜು ಆವರಣದಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆಯುತ್ತಿದ್ದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಚಿಕ್ಕೋಡಿ ಸಂಸದ ಪ್ರಕಾಶ್ ಹುಕ್ಕೇರಿ ಮತ್ತು ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿ ಮಠ ನಡುವೆ ತೀವ್ರ ವಾಗ್ಯುದ್ಧ ನಡೆಯಿತು.
ಕಾರ್ಯಕ್ರಮಕ್ಕೆ ಸಂಸದ ಹುಕ್ಕೇರಿ ಅವರು ತಡವಾಗಿ ಆಗಮಿಸಿದ್ದನ್ನು ಆಕ್ಷೇಪಿಸಿದ ಬಿಜೆಪಿ ಎಂಎಲ್‌ಸಿ ಕವಟಗಿಮಠ ಅವರು ವೇದಿಕೆಯಲ್ಲಿದ್ದ ತಹಶೀಲ್ದಾರ್ ಚಿದಂಬರ ಕುಲಕರ್ಣಿ ಮತ್ತು ಉಪವಿಭಾಗಾಧಿಕಾರಿ ಗೀತಾ ಕೌಲಗಿ ವಿರುದ್ಧ ಹರಿ ಹಾಯ್ದರು.
ಹುಕ್ಕೇರಿ ಮೇಲೆಯೂ ಆಕ್ರೋಶ ಹೊರಹಾಕಿದ ಕವಟಗಿ ಮಠ ಸರ್ಕಾರಿ ಕಾರ್ಯಕ್ರಮವನ್ನು ಖಾಸಗಿ ಕಾರ್ಯಕ್ರಮ ಮಾಡಲು ಯಾಕೆ ಪ್ರಯತ್ನಿಸುತ್ತೀರಿ ಎಂದು ಪ್ರಶ್ನಿಸಿದರು. ಈ ವೇಳೆ ಇಬ್ಬರ ನಡುವೆ ಕಾವೇರಿದ ಮಾತಿನ ಚಕಮಕಿ ನಡೆಯಿತು.