ಚಿಕ್ಕೋಡಿ: ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡು ನೌಕರಿಯಿಂದ ವಜಾಗೊಂಡ ಸಾರಿಗೆ ಸಿಬ್ಬಂದಿಗಳನ್ನು ಪುನ: ನೌಕರಿಗೆ ತೆಗೆದುಕೊಳ್ಳುವ ತಿರ್ಮಾನ ತೆಗೆದುಕೊಳ್ಳಲಾಗಿದೆ. ನೌಕರರು ಮತ್ತೊಮ್ಮೆ ತಪ್ಪು ಮಾಡದೆ ಸರಕಾರದ ನಿಯಮಗಳನ್ನು ಪಾಲಿಸಬೇಕು ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು.
ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥದ ಅಡಿಗಲ್ಲು ಸಮಾರಂಭದಲ್ಲಿ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ಸಾರಿಗೆ ಸಿಬ್ಬಂದಿ ಬೇಡಿಕೆಯನ್ನು ಹಂತ ಹಂತವಾಗಿ ಈಡೇರಿಸಲಾಗುತ್ತದೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆ ಮಾತುಕತೆ ನಡೆಸಲಾಗಿದೆ. ಸಿಎಂ ಅವರು ಸಾರಿಗೆ ಸಿಬ್ಬಂದಿ ಬೇಡಿಕೆಗೆ ಸ್ಪಂದಿಸಿದ್ದಾರೆ ಎಂದರು.
ಇದನ್ನೂ ಓದಿ:‘ಭಾರತ್ ಬಂದ್’:ಐಟೆಕ್ ಸಮೀತಿಯಿಂದ ವಿವಿಧ ಕಂಪನಿಗಳ ಪ್ರವೇಶದ್ವಾರದಲ್ಲಿ ಪ್ರತಿಭಟನೆಗೆ ನಿರ್ಧಾರ
ಸಾರಿಗೆ ಸಿಬ್ಬಂದಿ ಏನೇ ಬೇಡಿಕೆ ಇದ್ದರೂ ಅವುಗಳನ್ನು ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು. ಆತುರದಿಂದ ಮುಷ್ಕರ ನಡೆಸಬಾರದು ಎಂದು ಸಾರಿಗೆ ಸಿಬ್ಬಂದಿಗೆ ಕಿವಿ ಮಾತು ಹೇಳಿದರು.